ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ರಾಮಕೃಷ್ಣರು ಮನೆಗೆ ಬಂದರು | ಪುರಂದರವಿಠಲ | Ramakrishnaru Manege Bandaru | Purandara Vithala


 

ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ರಾಮಕೃಷ್ಣರು ಮನೆಗೆ ಬಂದರು ಬಾಗಿಲು ತೆರೆಯಿರೋ ||
ಕಾಮಧೇನು ಬಂದಂತಾಯ್ತು ವರವ ಬೇಡಿರೋ ||ಪ||

ಚೆಂಡು ಬುಗುರಿ ಚಿಣ್ಣಿಕೋಲು ಗಜ್ಜುಗವಾಡುತ 
ದುಂಡು ಮಲ್ಲಿಗೆ ಮುಡಿದು ಕೊಳಲನೂದಿ ಪಾಡುತ ||
ಹಿಂಡು ಪೆಣ್ಗಳ ಮುದ್ದು ಮುಖದ ಸೊಬಗ ನೋಡುತ 
ಬಂಡು ಮಾಡಿ ಬಾಲೆಯರೊಡನೆ ಸರಸವಾಡುತ ||೧||

ಮಕರ ಕುಂಡಲ ನೀಲ ಮುತ್ತಿನ ಬಾವುಲಿಡುತಲಿ 
ಕಂಕಣಹಾರ ತೋಳಬಂದಿ ತೊಡುಗೆ ತೊಡುತಲಿ ||
ಸುಕುಮಾರ ಸುಂದರವಾದ ಉಡುಗೆ ಉಡುತಲಿ
ಮುಖದ ಕಮಲ ಮುಗುಳು ನಗೆಯ ಸುಖವ ಕೊಡುತಲಿ ||೨||

ಪೊಕ್ಕುಳಲ್ಲಿ ಅಜನ ಪಡೆದ ದೇವ ದೇವನು 
ಚಿಕ್ಕ ಉಂಗುಷ್ಟದಲ್ಲಿ ಗಂಗೆಯ ಪಡೆದನು ||
ಮಕ್ಕಳ ಮಾಣಿಕ್ಯ ಗುರು ಪುರಂದರ ವಿಠಲರಾಯನು 
ಅಕ್ಕರೆಯಿಂದಲಿ ಮುಕುತಿ ಕೊಡುವ ರಂಗನಾಥನು ||೩||

rAmakRuShNaru manege baMdaru bAgilu tereyirO ||
kAmadhEnu baMdaMtAytu varava bEDirO ||pa||

cheMDu buguri ciNNikOlu gajjugavADuta 
duMDu mallige muDidu koLalanUdi pADuta ||
hiMDu peNgaLa muddu muKada sobaga nODuta 
baMDu mADi bAleyaroDane sarasavADuta ||1||
 
makara kuMDala nIla muttina bAvuliDutali 
kaMkaNahAra tOLabaMdi toDuge toDutali ||
sukumAra suMdaravAda uDuge uDutali
muKada kamala muguLu nageya suKava koDutali ||2||

pokkuLalli ajana paDeda dEva dEvanu 
cikka uMguShTadalli gaMgeya paDedanu ||
makkaLa mANikya guru puraMdara viThalarAyanu 
akkareyiMdali mukuti koDuva raMganAthanu ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru