ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಆದದ್ದೆಲ್ಲ ಒಳಿತೇ ಆಯಿತು | ಪುರಂದರವಿಠಲ | Adaddella Olite Ayitu | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು 
Kruti: Sri Purandara dasaru


ಆದದ್ದೆಲ್ಲ ಒಳಿತೇ ಆಯಿತು |ಪ|
ನಮ್ಮ ಶ್ರೀಧರನ್ನ ಸೇವೆ ಮಾಡಲು ಸಾಧನ ಸಂಪತ್ತಾಯಿತು ||ಅಪ||

ದಂಡಿಗೆ ಬೆತ್ತ ಹಿಡಿಯುವುದಕ್ಕೆ | ಮಂಡೆ ಬಾಗಿ ನಾಚುತ್ತಿದ್ದೆ ||
ಹೆಂಡತಿ ಸಂತತಿ ಸಾವಿರವಾಗಲಿ | ದಂಡಿಗೆ ಬೆತ್ತ ಹಿಡಿಸಿದಳಯ್ಯ ||೧||

ಗೋಪಾಳ ಬುಟ್ಟಿ ಹಿಡಿಯುವುದಕ್ಕೆ | ಭೂಪತಿಯಂತೆ ಗರ್ವಿಸುತ್ತಿದ್ದೆ ||
ಆ ಪತ್ನೀ ಕುಲ ಸಾವಿರವಾಗಲಿ | ಗೋಪಾಳ ಬುಟ್ಟಿ ಹಿಡಿಸಿದಳಯ್ಯ ||೨||

ತುಳಸೀ ಮಾಲೆ ಹಾಕುವುದಕ್ಕೆ | ಅರಸನಾಗಿ ನಾಚುತ್ತಿದ್ದೆ ||
ಸರಸೀಜಾಕ್ಷ ಪುರಂದರ ವಿಠಲನು | ತುಳಸೀ ಮಾಲೆ ಹಾಕಿಸಿದನು ||೩||

Adaddella oLitE Ayitu |pa|
namma SrIdharanna sEve mADalu sAdhana saMpattAyitu ||apa||
 
daMDige betta hiDiyuvudakke | maMDe bAgi nAcuttidde ||
heMDati saMtati sAviravAgali | daMDige betta hiDisidaLayya ||1||
 
gOpALa buTTi hiDiyuvudakke | BUpatiyaMte garvisuttidde ||
A patnI kula sAviravAgali | gOpALa buTTi hiDisidaLayya ||2||
 
tuLasI mAle hAkuvudakke | arasanAgi nAcuttidde ||
sarasIjAkSha puraMdara viThalanu | tuLasI mAle hAkisidanu ||3||
 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru