ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಆರ್ಯನ್ನ ಯೋಗಧುರ್ಯನ್ನ | ಹಯವದನ | Aryanna Yogadhuryanna | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಆರ್ಯನ್ನ ಯೋಗಧುರ್ಯನ್ನ 
ಭಜಿಸಿ ವರ್ಯನ್ನ ಮಧ್ವಾಚಾರ್ಯನ್ನ || ಪ ||

ಅಕಳಂಕ ಮಹಿಮ ಚರಿತ್ರನ್ನ 
ಈ ಸಕಲ ಭುವನಕೆ ಪವಿತ್ರನ್ನ
ಪ್ರಕಟ ಭಾರತಿ ಸತ್ಕಳತ್ರನ್ನ ಪಾಪ
ನಿಕರಕಾನನ ವೀತಿ ಹೋತ್ರನ್ನ || ೧ ||

ನಿರ್ಜಿತ ಪಾಷಂಡ ಯೂಧನ್ನ ದೂರ ವರ್ಜಿತ
ಭವ ದುಃಖ ಬದ್ದನ್ನ ಸಜ್ಜನ ರಘಕೆನಿರೋಧನ್ನ
ದೋಷ ವರ್ಜಿತ ಗುಣಪೂರ್ಣ ಬೋಧನ್ನ || ೨ ||

ಸದಮಲ ಲಕ್ಷಣ ತುಂಗನ್ನ | ಸಿರಿಸದನನ್ನ
ಕರುಣಾಂತ ರಂಗನ್ನ | ಮದ ಮೋಹ ತಿಮಿರ ಪತಂಗನ್ನ
ಹಯವದನನ್ನ ಚರಣಾಬ್ಜ ಭೃಂಗನ್ನ || ೩ ||

Aryanna yOgadhuryanna 
Bajisi varyanna madhvAcAryanna || pa ||

akaLaMka mahima caritranna 
I sakala Buvanake pavitranna
prakaTa BArati satkaLatranna pApa
nikarakAnana vIti hOtranna || 1 ||

nirjita pAShaMDa yUdhanna dUra varjita
Bava duHKa baddanna sajjana raGakenirOdhanna
dOSha varjita guNapUrNa bOdhanna || 2 ||

sadamala lakShaNa tuMganna | sirisadananna
karuNAMta raMganna | mada mOha timira pataMganna
hayavadananna caraNAbja BRuMganna || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru