ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಾಗಿ ಬೇಡುವೆ ಪಿಡಿಯೊ | ಶ್ಯಾಮಸುಂದರ ರಾಣಿ | Baagi Beduve Pidiyo | Shyamasundara Dasaru


ಸಾಹಿತ್ಯ : ಶ್ರೀ ಶ್ಯಾಮಸುಂದರ ದಾಸರು (ಶ್ಯಾಮಸುಂದರ ರಾಣಿ)
Kruti: Sri Shyamasundara Dasaru (Shyamasundara Rani)


ಬಾಗಿ ಬೇಡುವೆ ಪಿಡಿಯೊ ಬೇಗ ಕೈಯ್ಯ 
ಭಾಗವತ ಜನಪ್ರಿಯ ಭಾಗಣ್ಣ ದಾಸಾರ್ಯ ||ಪ||

ದ್ವಿಜಕುಲಾಬ್ಧಿಗೆ ಪೂರ್ಣ ದ್ವಿಜರಾಜನೆಂದೆನಿಪ
ವಿಜಯವಿಠಲದಾಸರೊಲಿಮೆ ಪಾತ್ರ
ನಿಜಮನದಿ ನಿತ್ಯದಲಿ ಭುಜಗ ಶಯನನ ಪಾದ
ಭಜಿಪ ಭಾಗ್ಯವನಲಿವ ಸುಜನರೊಳು ಇಡು ಎಂದು ||೧||

ನೀನೇವೆ ಗತಿ ಎಂದ ದೀನರಿಗೆ ನಾನೆಂಬ
ಹೀನಮತಿ ಕಳೆದು ಪವಮಾನ ಪಿತನ
ಧ್ಯಾನಗೈಯ್ಯುವ ದಿವ್ಯ ಜ್ಞಾನ ಮಾರ್ಗವ ತೋರಿ
ಸಾನುರಾಗದಿ ಪೊರೆವ ದಾನಿ ದಯವಾರಿಧಿಯೇ ||೨||

ಮಂದಜನ ಸಂದೋಹ ಮಂದಾರತರು ವಿಜಿತ
ಕಂದರ್ಪ ಕಾರುಣ್ಯ ಸಿಂಧು ಬಂಧು
ಕಂದನೆಂದರಿದೆನ್ನ ಕುಂದು ಎಣಿಸದೆ ಹೃದಯ
ಮಂದಿರದಿ ಶ್ರೀ ಶ್ಯಾಮಸುಂದರನ ತೋರೆಂದು ||೩||

baagi bEDuve piDiyo bEga kaiyya 
bhaagavata janapriya bhaagaNNa daasaarya ||pa||

dwijakulaabdhige pUrNa dwijaraajaneMdenipa
vijayaviThaladaasarolime paatra
nijamanadi nityadali bhujaga shayanana paada
bhajipa bhaagyavanaliva sujanaroLu iDu eMdu ||1||

nInEve gati eMda dInarige naaneMba
heenamati kaLedu pavamaana pitana
dhyaanagaiyyuva divya j~jaana maargava tOri
saanuraagadi poreva daani dayavaaridhiyE ||2||

maMdajana saMdOha maMdaarataru vijita
kaMdarpa kaaruNya siMdhu baMdhu
kaMdaneMdaridenna kuMdu eNisade hRudaya
maMdiradi shrI shyaamasuMdarana tOreMdu ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru