ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಾರೋ ಮುಂದಿರೋ | ಹಯವದನ | Baaro Mundiro | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಬಾರೋ ಮುಂದಿರೋ ಪರನಾರಿಸಹೋದರ
ಮಾರ ನಿನಗಾರ ಮುದ್ದತರ ವೀರಹನುಮ ||ಪ|| 

ಮರಗಳ ಮುರಿದೆ ಕರೆಕರೆದು ನೆರೆದಸುರರ
ಶಿರಂಗಳ ತರಿದೆ ನಿನ್ನ ಸರಿಯಾರೋ ವೀರಹನುಮ ||೧||

ಕಂಡೆ ನಿನ್ನ ಬಲವ ಸುಪ್ರಚಂಡ ರಿಪುಕುಲವ
ತುಂಡು ತುಂಡಿಕ್ಕಿ ಮೆರೆದೆ ಬಲುಗಂಡೆ ವೀರಹನುಮ ||೨||

ಎನ್ನೊಡೆಯ ಶ್ರೀಹಯವದನಗೆ ರನ್ನದ ಕನ್ನಡಿಯಂತೆ ಪ್ರ-
ಸನ್ನ ಮೋಹದ ಬಾಳು ಬಾಳು ವೀರಹನುಮ ||೩||

baarO muMdirO paranaarisahOdara
maara ninagaara muddatara vIrahanuma ||pa|| 

maragaLa muride karekaredu neredasurara
shiraMgaLa taride ninna sariyaarO vIrahanuma ||1||

kaMDe ninna balava suprachaMDa ripukulava
tuMDu tuMDikki merede balugaMDe vIrahanuma ||2||

ennoDeya shrIhayavadanage rannada kannaDiyaMte pra-
sanna mOhada baaLu baaLu veerahanuma ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru