ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಭಾರತಿ ದೇವಿಯೆ ಮಾರುತಿ ರಾಣಿಯೆ | ಹಯವದನ | Bharati Deviye | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಭಾರತಿ ದೇವಿಯೆ ಮಾರುತಿ ರಾಣಿಯೆ ||ಪ||

ಮಂದಿ ನಾಲ್ವರನು ಹೊಂದಿಸಿ ಉದರದಿ
ಒಂದೆ ರೂಪದಿ ಜನರಿಗೆ ತೋರುವ ಸತಿ ||೧||

ಸೀತಾಕಾಂತನ ದೂತನಾಗಿ ಪ್ರ-
ಖ್ಯಾತಿಯ ಪಡೆದನ ಪ್ರೀತಿಯ ಸತಿಯಳೆ ||೨||     

ದುಷ್ಟ ಕಲಿಯ ಕುಲ ಕುಟ್ಟಿ ಕೆಡಹಿದ ಭಲ
ಕಟ್ಟಾಳು ಭೀಮನ ಪಟ್ಟದ ಸತಿಯಳೆ  ||೩||

ಮೂರು ಏಳು ಕುಲ ಮಾಯಿಗಳನು ಗೆದ್ದು
ಬೋರೆಮರದ ಕೆಳಗಿರುವನ ಸತಿಯಳೆ ||೪||

ಹಗಲಿರುಳೆನ್ನದೆ ಹಯವದನನ ಪದ
ಹೃದಯ ಕಮಲದೊಳು ಭಜಿಪನ ಸತಿಯಳೆ ||೫||

bhaarati dEviye maaruti raaNiye ||pa||

maMdi naalwaranu hoMdisi udaradi
oMde roopadi janarige tOruva sati ||1||

sItAkAMtana dUtanAgi pra-
khyaatiya paDedana prItiya satiyaLe ||2||     

duShTa kaliya kula kuTTi keDahida bhala
kaTTaaLu bhImana paTTada satiyaLe  ||3||

mUru ELu kula maayigaLanu geddu
bOremarada keLagiruvana satiyaLe ||4||

hagaliruLennade hayavadanana pada
hRudaya kamaladoLu bhajipana satiyaLe ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru