ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಎಲ್ಲ ಲೀಲೆ ಇದೆಲ್ಲ ಲೀಲೆ | ಹಯವದನ | Ella Leele idella Leele | Hayavadana | Devaranama


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಎಲ್ಲ ಲೀಲೆ ಇದೆಲ್ಲ ಲೀಲೆ
ಎಲ್ಲ ಲೀಲೆ ರಂಗಗೆಲ್ಲ ಲೀಲೆ ||ಪ||

ಪುಟ್ಟಿಸುವುದು ಮನವಿಟ್ಟು ಕಾವುದು
ದುಷ್ಟರ ಶಿಕ್ಷೆ ಅಲ್ಲಿ ವಿಶಿಷ್ಟರ ರಕ್ಷೆ ||೧||

ನೀರೊಳುಲ್ಲಾಸ ಮತ್ತಾರಣ್ಯವಾಸ
ಹಾರುವರಾಟ ತನ್ನ ನಾರಿಯ ಭೇಟ ||೨||

ಗೊಲ್ಲರಾಕೃತಿ ಬತ್ತಲೆಯ ಸ್ಥಿತಿ 
ಬಲ್ಲಿದ ದೈವ ಕಲಿಯ ಗೆಲ್ಲುವ ಭಾವ ||೩||

ವರನಿಪ್ಪುದು ಕರೆದರೆ ಬಪ್ಪುದು
ಧರೆಯಜನುಮ ಪರಿಪರಿಯ ಕರ್ಮ ||೪||

ಹೆಂಗಳಕೂಟ ಅಪಾಂಗದ ನೋಟ ಹಾಸ್ಯ-
ದಂಗದಿಂದೂಟ ರಣರಂಗದಿಂದೋಟ ||೫||

ಅಂಬಿನ ವೇಧ ನಿನ ತುಂಬಿದ ಕ್ರೋಧ ತ್ರಿ-
ಯಂಬಕ ಪೂಜೆ ತ್ರಿವಿಡಂಬನವೋಜೆ ||೬||

ಕರ್ತುಂ ಅಕರ್ತುಂ ಮತ್ತನ್ಯಥಾಕರ್ತುಂ ಎಂಬ
ಶಕ್ತಿದೇವಗೆ ಬಲುಯುಕ್ತಿ ಇವಗೆ ||೭||

ನಾವೆಕರ್ತವ್ಯಂ ಸುಪ್ರವೆವಕ್ತವ್ಯಂ
ಏಸು ಮಹಿಮೆಗೆ ಕೃತಕೃತ್ಯ ನಮಗೆ ||೮||

ಪ್ರಿಯಮೋದನ ದೈತೇಯಭೇದನ
ಹಯವದನ ನಿನ್ನರ್ಥಿ ಕಾಯಿದನ ||೯||


ella lIle idella lIle
ella lIle raMgagella lIle ||pa||

puTTisuvudu manaviTTu kaavudu
duShTara shikShe alli vishiShTara rakShe ||1||

nIroLullaasa mattaaraNyavaasa
haaruvaraaTa tanna naariya bhETa ||2||

gollaraakRuti battaleya sthiti 
ballida daiva kaliya gelluva bhaava ||3||

varanippudu karedare bappudu
dhareyajanuma paripariya karma ||4||

heMgaLakUTa apaaMgada nOTa haasya-
daMgadiMdUTa raNaraMgadiMdOTa ||5||

aMbina vEdha nina tuMbida krOdha tri-
yaMbaka pUje triviDaMbanavOje ||6||

kartuM akartuM mattanyathaakartuM eMba
shaktidEvage baluyukti ivage ||7||

naavekartavyaM supravevaktavyaM
Esu mahimege kRutakRutya namage ||8||

priyamOdana daitEyabhEdana
hayavadana ninnarthi kaayidana ||9||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru