ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಇಂಥ ಹೆಣ್ಣನ್ನು ನಾನೆಲ್ಲಿ ಕಾಣೆನೋ | ಪುರಂದರ ವಿಠಲ | Intha Hennannu Nanelli | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು
Kruti: Sri Purandara dasaru


ಇಂಥ ಹೆಣ್ಣನ್ನು ನಾನೆಲ್ಲಿ ಕಾಣೆನೋ ಹೊಂತಕಾರಿ ಕಾಣಿರೋ ||ಪ||

ಸಂತತ ಸುರರಿಗೆ ಪೀಯೂಷ ಉಣಿಸಿದ |
ಪಂಕ್ತಿಯೊಳಗೆ ಪರವಂಚನೆ ಮಾಡಿದ ||ಅಪ||

ಮಂದರಗಿರಿ ತಂದು ಸಿಂಧುವಿನೊಳಿಟ್ಟು ಚಂದದಿ ಕಡೆದು ಅಮೃತವ ತೆಗೆದು 
ಇಂದು ಮುಖಿ ನೀ ಬಡಿಸೆಂದು ಕೊಟ್ಟರೆ ದಂಧನಗಳ ಮಾಡಿ ದೈತ್ಯರ ವಂಚಿಸಿದ ||೧||

ವಿಶ್ವಾಸದಿಂದಲಿ ಅಸುರಗೆ ವರವಿತ್ತು ತ್ರಿಶೂಲಧರ ಓಡಿ ಬಳಲುತಿರೆ |
ನಸುನಗುತಲಿ ಬಂದು ಭಸ್ಮಾಸುರನಿಗೆ ಭೋಗ ದಾಸೆಯ ತೋರಿ ಭಸ್ಮವ ಮಾಡಿದ ||೨||

ವಸುಧೆಯೊಳಗೆ ಹೆಣ್ಣು ಒಸಗೆಯಾಗದ ಮುನ್ನ ಬಸಿರಲಿ ಬ್ರಹ್ಮನ ಪಡೆದವಳಿವಳು ||
ಕುಸುಮನಾಭ ಶ್ರೀ ಪುರಂದರ ವಿಠಲನ ಪೆಸರು ಪೊತ್ತಿಹಳು ಈ ಪೊಸ ಕನ್ನಿಕೆ ||೩||

iMtha heNNannu nAnelli kANenO hoMtakAri kANirO ||pa||
 
saMtata surarige pIyUSha uNisida |
paMktiyoLage paravaMcane mADida ||apa||
 
maMdaragiri taMdu siMdhuvinoLiTTu caMdadi kaDedu amRutava tegedu 
iMdu muKi nI baDiseMdu koTTare daMdhanagaLa mADi daityara vaMcisida ||1||
 
viSvAsadiMdali asurage varavittu triSUladhara ODi baLalutire |
nasunagutali baMdu BasmAsuranige BOga dAseya tOri Basmava mADida ||2||
 
vasudheyoLage heNNu osageyAgada munna basirali brahmana paDedavaLivaLu ||
kusumanABa SrI puraMdara viThalana pesaru pottihaLu I posa kannike ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru