ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕೇಳಲೊಲ್ಲನೆ ಎನ್ನ ಮಾತನು ರಂಗ | ಹಯವದನ | Kelalollane Enna Matanu | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಕೇಳಲೊಲ್ಲನೆ ಎನ್ನ ಮಾತನು ರಂಗ ||ಪ||
ಕಾಳೀಮರ್ದನ ಕೃಷ್ಣಗೆ ಹೇಳೆ ಗೋಪ್ಯಮ್ಮ ಬುದ್ಧಿ ||ಅಪ||

ಬಿಟ್ಟ ಕಣ್ಣನು ಮುಚ್ಚಲೊಲ್ಲನೆ ದೊಡ್ಡ
ಬೆಟ್ಟಕ್ಕೆ ಬೆನ್ನೊತ್ತಿ ನಿಂದನೆ ಬಲು
ಸಿಟ್ಟಿಲಿ ಕೋರೆಹಲ್ಲ ಕಿರಿದನೆ ಈಗ
ಗಟ್ಟಿ ಉಕ್ಕಿನ ಕಂಬವೊಡೆದು ಬಂದನೆ ರಂಗ ||೧||

ಮೂರಡಿ ಭೂಮಿಬೇಡಿ ಬಂದನೆ ತಾಯ-
ಶಿರವ ಕಡಿಯಲಿಕೆ ಕೊಡಲಿ ತಂದನೆ
ನಾರಸೀರೆಯನುಟ್ಟುಕೊಂಡನೆ ಬಲು
ಚೋರತನದಲಿ ಹರವಿಹಾಲ ಕುಡಿದನೆ ರಂಗ ||೨||

ಬತ್ತಲೆ ನಾರಿಯರ ಅಪ್ಪಿದ ಹೋಗಿ
ಉತ್ತಮ ಅಶ್ವವ ಹತ್ತಿದ
ಹತ್ತವತಾರವ ತೋರಿದ ದಿಟ್ಟ
ಮೂರ್ತಿ ನಮ್ಮ ಚೆಲವ ಶ್ರೀ ಹಯವದನ ||೩||

kELalollane enna maatanu raMga ||pa||
kaaLImardana kRuShNage hELe gOpyamma buddhi ||apa||

biTTa kaNNanu muchchalollane doDDa
beTTakke bennotti niMdane balu
siTTili kOrehalla kiridane Iga
gaTTi ukkina kaMbavoDedu baMdane raMga ||1||

mUraDi bhUmibEDi baMdane taaya-
shirava kaDiyalike koDali taMdane
naarasIreyanuTTukoMDane balu
chOratanadali haravihaala kuDidane raMga ||2||

battale naariyara appida hOgi
uttama ashwava hattida
hattavataarava tOrida diTTa
moorti namma chelava shrI hayavadana ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru