ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮಧ್ವರಾಯ ಗುರು ಮಧ್ವರಾಯ | ಪುರಂದರ ವಿಠಲ | Madhwaraya Guru | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು
Kruti: Sri Purandara dasaru


ಮಧ್ವರಾಯ ಗುರು ಮಧ್ವರಾಯ ||ಪ||

ರಾಮಾವತಾರದೊಳೊಮ್ಮೆ ಮಧ್ವರಾಯ |
ನೀ ಮಹಾ ಹನುಮನಾದ್ಯೋ ಮಧ್ವರಾಯ ||
ಕಾಮಿತಾರ್ಥ ಸುರರಿಗಿತ್ಯೋ ಮಧ್ವರಾಯಾ |
ಅಯ್ಯಾ ಮುಷ್ಠಿಯಿಂದ ರಾವಣನ ಗೆದ್ಯೋ ಮಧ್ವರಾಯ ||೧||

ಕೃಷ್ಣಾವತಾರದೊಳೊಮ್ಮೆ ಮಧ್ವರಾಯ |
ದಿಟ್ಟ ಕಲಿಭೀಮ ನಾದ್ಯೋ ಮಧ್ವರಾಯ |
ಕುಟ್ಟಿದ್ಯೋ ಕೌರವರನೆಲ್ಲ ಮಧ್ವರಾಯ ಅಯ್ಯಾ
ಶ್ರೀ ಕೃಷ್ಣನ ಹಿತವ ಪಡೆದ್ಯೋ ಮಧ್ವರಾಯ ||೨||

ಧರಣಿಯೊಳು ನರನಾಗಿ ಜನಿಸಿದ್ಯೋ ಮಧ್ವರಾಯ |
ದುರುಳ ಮಾಯ ಮತವ ತರಿದ್ಯೋ ಮಧ್ವರಾಯ ||
ಗುರುವ್ಯಾಸರ ಹಿತವ ಪಡೆದ್ಯೋ ಮಧ್ವರಾಯ ಅಯ್ಯಾ |
ಪುರಂದರ ವಿಠಲನ ದಾಸನಾದ್ಯೋ ಮಧ್ವರಾಯ ||೩||

madhvarAya guru madhvarAya ||pa||
 
rAmAvatAradoLomme madhvarAya |
nI mahA hanumanAdyO madhvarAya ||
kAmitArtha surarigityO madhvarAyA |
ayyA muShThiyiMda rAvaNana gedyO madhvarAya ||1||
 
kRuShNAvatAradoLomme madhvarAya |
diTTa kaliBIma nAdyO madhvarAya |
kuTTidyO kauravaranella madhvarAya ayyA
SrI kRuShNana hitava paDedyO madhvarAya ||2||
 
dharaNiyoLu naranAgi janisidyO madhvarAya |
duruLa mAya matava taridyO madhvarAya ||
guruvyAsara hitava paDedyO madhvarAya ayyA |
puraMdara viThalana dAsanAdyO madhvarAya ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru