ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮನಸು ಕರಗದೇ ಸ್ವಾಮಿ | ಪ್ರಾಣೇಶ ವಿಠಲ | Manasu Karagade Swamy | Pranesha Vithala


ಸಾಹಿತ್ಯ : ಶ್ರೀ ಪ್ರಾಣೇಶ ವಿಠಲ ದಾಸರು 
Kruti:Sri Pranesha Vithala Dasaru 


ಮನಸು ಕರಗದೇ ಸ್ವಾಮಿ ದಯವು ಬಾರದೇ ||ಪ||

ದೀನನಾಗಿ ನಿನ್ನ ಪಾದ ನಂಬಿದೆನೋ ಕೃಪಾ ಸಿಂಧು ||ಅಪ||

ಒಡಲಿಗೋಸುಗವಾಗಿ ಪರರ ಅಡಿಗಳಿಗೆ ನಮಿಸಿ ಅವರ
ಬಿಡುನುಡಿಗಳ ಕೇಳಲಾರೆ ಹೇಳಲಾರೆ ಹೇ ಮುರಾರೇ ||೧||

ಜನನಿ ಜನಕ ನೀನು ಎಂದು ನಿನ್ನ ನಂಬಿದೆ ದೀನ ಬಂಧು 
ಎನ್ನ ಪಾಲಿಸೋ ಈಗ ಬಂದು ಮನ್ನಿಸಯ್ಯ ಕೃಪಾ ಸಿಂಧು ||೨|| 

ದಿನವು ಕಳೆದು ಹೋಯಿತಲ್ಲ ಪ್ರಾಣೇಶ ವಿಠಲ
ಮನ್ನಿಸುವರು ಒಬ್ಬರಿಲ್ಲ ಕಾಯೋ ಬಾಲ ಗೋಪಾಲ ||೩||

manasu karagadE svaami dayavu baaradE ||pa||

dInanaagi ninna paada naMbidenO kRupaa siMdhu ||apa||

oDaligOsugavaagi parara aDigaLige namisi avara
biDunuDigaLa kELalaare hELalaare hE muraarE ||1||

janani janaka nInu eMdu ninna naMbide dIna baMdhu 
enna paalisO Iga baMdu mannisayya kRupaa siMdhu ||2|| 

dinavu kaLedu hOyitalla praaNEsha viThala
mannisuvaru obbarilla kaayO baala gOpaala ||3||
 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru