ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಯಾರೇನೆಂದರೋ ರಂಗಯ್ಯ | ಪುರಂದರ ವಿಠಲ | Yaarenendaro Rangayya | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara dasaru (Purandara vittala)


ಯಾರೇನೆಂದರೋ ರಂಗಯ್ಯ ನಿನ್ನ ಯಾರೇನೆಂದರೋ ಕೃಷ್ಣಯ್ಯ ||ಪ||

ಸಕಲ ಭಾಗವತರು ಗತಿ ತಾಳಮೇಳದಿಂದ 
ತಕಕಿಟ ಕಿಟತಕ ಧಿಮಿಕೆಂದು ಕುಣಿವಾಗ ರಂಗಯ್ಯ ||ಅಪ||

ಸಕ್ಕರೆ ಚೀಣಿ ಹಾಲಿನ ಕೆನೆರಸದಿಂದ ಉಕ್ಕುವ 
ನೊರೆ ಹಾಲನು ಮೆದ್ದ ರಂಗಯ್ಯ ||೧||

ದ್ರುಪದನ ಮಗಳ ಸೀರೆಯ ಸುತ್ತಿ ಸೆಳೆವಾಗ 
ಕೃಪೆಯಿಂದ ಅಕ್ಷಯವಿತ್ತ ದೇವನೆ ನಿನ್ನ ||೨||

ಜಗದೊಡೆಯ ಮೂಡಲ ಕೋನೇರಿ ತಿಮ್ಮ 
ಅಗಣಿತ ಮಹಿಮ ಶ್ರೀ ಪುರಂದರ ವಿಠಲ ನಿನ್ನ ||೩||

yArEneMdarO raMgayya ninna yArEneMdarO kRuShNayya ||pa||

sakala BAgavataru gati tALamELadiMda 
takakiTa kiTataka dhimikeMdu kuNivAga raMgayya ||apa||

sakkare cINi hAlina kenerasadiMda ukkuva 
nore hAlanu medda raMgayya ||1||

drupadana magaLa sIreya sutti seLevAga 
kRupeyiMda akShayavitta dEvane ninna ||2||

jagadoDeya mUDala kOnEri timma 
agaNita mahima SrI puraMdara viThala ninna ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru