ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಆವರೀತಿಯಿಂದ ನೀ ಎನ್ನ ಪಾಲಿಪೆ | ಹಯವದನ | Avareetiyinda ni enna | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:  Sri Vadirajaru (Hayavadana)


ಆವರೀತಿಯಿಂದ ನೀ ಎನ್ನ ಪಾಲಿಪೆ ಶ್ರೀ ವಿಭು ಹಯವದನ ||ಪ||
ಈ ವಿಧ ಭವದಲಿ ಎಷ್ಟು ಬವಣೆ ಪಟ್ಟೆ ತಾವರೆದಳ ನಯನ || ಅಪ|| ಹಯವದನ

ಕಾಮನ ಬಾಧೆಯ ತಡೆಯಲಾರದೆ ಕಂಡ ಕಾಮಿನಿಯರನು ಕೂಡಿ ||
ನೇಮನಿಷ್ಠೆಯಿಂದ ನಿನ್ನನು ಭಜಿಸದೆ ಪಾಮರ ನಾನಾದೆನೋ ಹಯವದನ ||೧||

ಅಂಗನೆಯರಲ್ಲಿ ಅಧಿಕ ಮೋಹದಿಂದ ಶೃಂಗಾರಗಳನೆ ಮಾಡಿ ||
ಮಂಗಳಾಂಗನೆ ನಿನ್ನ ಮಹಿಮೆಯ ಪೊಗಳದೆ ಭಂಗಕ್ಕೆ ಒಳಗಾದೆನೋ ಹಯವದನ ||೨||

ಹೀನ ಸಂಗವನೆಲ್ಲ ಹಯಮುಖ ದೇವನೇ ವರ್ಜಿಸುವಂತೆ ಮಾಡೋ ||
ಜ್ಞಾನಿಗಳರಸನೇ ದಯವಿಟ್ಟು ನಿನ್ನನು ಧ್ಯಾನಿಸುವಂತೆ ಮಾಡೋ ಹಯವದನ ||೩||

AvarItiyiMda nI enna pAlipe SrI viBu hayavadana ||pa||
I vidha Bavadali eShTu bavaNe paTTe tAvaredaLa nayana || apa|| hayavadana
 
kAmana bAdheya taDeyalArade kaMDa kAminiyaranu kUDi ||
nEmaniShTheyiMda ninnanu Bajisade pAmara nAnAdenO hayavadana ||1||
 
aMganeyaralli adhika mOhadiMda SRuMgAragaLane mADi ||
maMgaLAMgane ninna mahimeya pogaLade BaMgakke oLagAdenO hayavadana ||2||
 
hIna saMgavanella hayamuKa dEvanE varjisuvaMte mADO ||
j~jAnigaLarasanE dayaviTTu ninnanu dhyAnisuvaMte mADO hayavadana ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru