ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಏನು ಧನ್ಯಳೋ ಲಕುಮಿ | ಪುರಂದರವಿಠಲ | Enu Dhanyalo Lakumi | Purandara Vithala


ಸಾಹಿತ್ಯ :  ಶ್ರೀ ಪುರಂದರ ದಾಸರು
Kruti:      Sri Purandara dasaru


ಏನು ಧನ್ಯಳೋ ಲಕುಮಿ ಎಂಥ ಮಾನ್ಯಳೋ ||ಪ||
ಸಾನುರಾಗದಿಂದ ಹರಿಯ ತಾನೆ ಸೇವೆ ಮಾಡುತಿಹಳು ||ಅಪ||

ಛತ್ರ ಚಾಮರ ವ್ಯಜನ ಪರ‍್ಯಂಕ ಪಾತ್ರ ರೂಪದಲ್ಲಿ ನಿಂತು ||
ಚಿತ್ರ ಚರಿತನಾದ ಹರಿಯ ನಿತ್ಯ ಸೇವೆ ಮಾಡುತಿಹಳು ||೧||

ಕೋಟಿ ಕೋಟಿ ಭೃತ್ಯರಿರಲು ಹಾಟಕಾಂಬರನ್ನ ಸೇವೆ ||
ಸಾಟಿಯಿಲ್ಲದೆ ಮಾಡಿ ಪೂರ್ಣ ನೋಟದಿಂದ ಸುಖಿಸುತಿಹಳು ||೨||

ಸರ್ವಸ್ಥಳದಿ ವ್ಯಾಪ್ತನಾದ ಸರ್ವದೋಷ ರಹಿತನಾದ
ಶರ್ವವಂದ್ಯನಾದ ಪುರಂದರ ವಿಠಲನ್ನ ಸೇವಿಸುವಳು ||೩||

Enu dhanyaLO lakumi eMtha mAnyaLO ||pa||
sAnurAgadiMda hariya tAne sEve mADutihaLu ||apa||
 
Catra cAmara vyajana par^yaMka pAtra rUpadalli niMtu ||
citra caritanAda hariya nitya sEve mADutihaLu ||1||
 
kOTi kOTi BRutyariralu hATakAMbaranna sEve ||
sATiyillade mADi pUrNa nOTadiMda suKisutihaLu ||2||
 
sarvasthaLadi vyAptanAda sarvadOSha rahitanAda
SarvavaMdyanAda puraMdara viThalanna sEvisuvaLu ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru