ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಈತನೇ ಕಾಣಿರೋ ಮಧ್ವಮುನಿ | ಹಯವದನ | Itane Kaniro Madhwamuni | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಈತನೇ ಕಾಣಿರೋ ಮಧ್ವಮುನಿ || ಪ || 

ಪರಿಪರಿ ಶೃತಿಗಳೆಂಬ ಗುಹೆಗಳಲಿ 
ಕೇಸರಿಯಂತೆ ಚರಿಸುತ್ತ 
ಹರಿಯೇ ಸರ್ವೋತ್ತಮ ಎಂಬ ಘೋಷಗಳಿಂದ 
ದುರುಳ ವಾದಿಗಳೆಂಬ ನರಿಗಳೋಡಿಸಿದಾತ ||೧||

ಸಕಲಾಗಮಗಳೆಂಬ ಶರಧಿಯೊಳಗೆ 
ಯುಕುತಿಯಿಂದಲಿ ಮಥಿಸಿ 
ಅಕಳಂಕ ಶ್ರೀ ಹರಿಯೆಂಬ ರತ್ನವ ಕಂಡು 
ಮುಕುಟದೊಳಿಟ್ಟು ಲೋಕದಿ ಮೆರೆಸಿದಾತ ||೨||

ವೇದಸಾರ ಈಶನೆಂಬ ತತ್ತ್ವವಾದ 
ಸುಧೆಯ ಕಲ್ಪಿಸಿಕೊಂಡು ಆದಿ ಮೂರುತಿ 
ಶ್ರೀಹಯವದನನ ದಿವ್ಯಪಾದ 
ಸೇವಕನಾದ ಮಧ್ವಮುನಿಯೆಂಬಾತ ||೩||

ItanE kANirO madhvamuni || pa || 

paripari SRutigaLeMba guhegaLali 
kEsariyaMte carisutta 
hariyE sarvOttama eMba GOShagaLiMda 
duruLa vAdigaLeMba narigaLODisidAta ||1||

sakalAgamagaLeMba SaradhiyoLage 
yukutiyiMdali mathisi 
akaLaMka SrI hariyeMba ratnava kaMDu 
mukuTadoLiTTu lOkadi meresidAta ||2||
 
vEdasAra IshaneMba tattvavAda 
sudheya kalpisikoMDu Adi mUruti 
SrIhayavadanana divyapAda 
sEvakanAda madhvamuniyeMbAta ||3||
 


Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru