ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಅಲ್ಲಿ ನೋಡಲು ರಾಮ | ಪುರಂದರವಿಠಲ | Alli Nodalu Rama | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು 
Kruti: Sri Purandara Dasaru


ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ
ಎಲ್ಲೆಲ್ಲಿ ನೋಡಿದರೂ ಅಲ್ಲಿ ಶ್ರೀ ರಾಮ ||ಪ||

ರಾವಣನ ಮೂಲ ಬಲ ಕಂಡು ಕಪಿಸೇನೆ 
ಆವಾಗಲೇ ಬೆದರಿ ಓಡಿದವು |
ಈ ವೇಳೆ ನರನಾಗಿ ಇರಬಾರದೆಂದೆಣಿಸಿ | 
ದೇವ ರಾಮಚಂದ್ರ ಜಗವೆಲ್ಲ ತಾನಾದ ||೧||

ಅವನಿಗೆ ಇವ ರಾಮ ಇವನಿಗೆ ಅವ ರಾಮ | 
ಅವನಿಯೊಳೀಪರಿ ರೂಪವುಂಟೆ ||
ಲವ ಮಾತ್ರದಿ ಅಸುರ ದುರುಳರೆಲ್ಲರೂ 
ಅವರವರ‍್ಹೊಡೆದಾಡಿ ನಾಶವಾಗಿ ಹೋದರು ||೨||

ಹನುಮದಾದಿ ಸಾಧು ಸಜ್ಜನರು ಕೂಡಿಕೊಂಡು 
ಕುಣಿಕುಣಿದಾಡಿದರು ಹರುಷದಿಂದ ||
ಕ್ಷಣದಲಿ ಪುರಂದರ ವಿಠಲರಾಯನ 
ಕೊನೆಗೊಡೆಯನು ತಾನು ಒಬ್ಬನಾಗಿ ನಿಂತ ||೩|

alli nODalu rAma illi nODalu rAma
ellelli nODidarU alli SrI rAma ||pa||
 
rAvaNana mUla bala kaMDu kapisEne 
AvAgalE bedari ODidavu |
I vELe naranAgi irabAradeMdeNisi | 
dEva rAmacaMdra jagavella tAnAda ||1||
 
avanige iva rAma ivanige ava rAma | 
avaniyoLIpari rUpavuMTe ||
lava mAtradi asura duruLarellarU 
avaravar^hoDedaaDi nASavAgi hOdaru ||2||
 
hanumadAdi sAdhu sajjanaru kUDikoMDu 
kuNikuNidADidaru haruShadiMda ||
kShaNadali puraMdara viThalarAyana 
konegoDeyanu tAnu obbanAgi niMta ||3|

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru