ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಎನಗೂ ಆಣೆ ರಂಗ | ಪುರಂದರ ವಿಠಲ | Enagu Aane Ranga | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು
Kruti: Sri Purandara Dasaru 


ಎನಗೂ ಆಣೆ ರಂಗ ನಿನಗೂ ಆಣೆ ||ಪ||
ಎನಗೂ ನಿನಗೂ ಇಬ್ಬರಿಗೂ ನಿನ್ನ ಭಕ್ತರಾಣೆ ||ಅಪ||

ನಿನ್ನ ಬಿಟ್ಟು ಅನ್ಯರ ಭಜಿಸಿದರೆ ಎನಗೇ ಆಣೆ ರಂಗ ||
ಎನ್ನ ನೀ ಕೈ ಬಿಟ್ಟು ಹೋದರೆ ನಿನಗೇ ಆಣೆ ||೧||

ತನುಮನ ಧನದಲಿ ವಂಚಕನಾದರೆ ಎನಗೇ ಆಣೆ ರಂಗ ||
ಮನಸು ನಿನ್ನಲಿ ನಿಲಿಸದಿದ್ದರೆ ನಿನಗೇ ಆಣೆ ||೨||

ಕಾಕು ಮನುಜರ ಸಂಗವ ಮಾಡಿದರೆ ಎನಗೆ ಆಣೆ ರಂಗ ||
ಲೌಕಿಕವ ಬಿಡಿಸದಿದ್ದರೆ ನಿನಗೇ ಆಣೆ ||೩||

ಶಿಷ್ಟರ ಸಂಗವ ಮಾಡದಿದ್ದರೆ ಎನಗೇ ಆಣೆ ರಂಗ ||
ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೇ ಆಣೆ ||೪||

ಹರಿ ನಿನ್ನಾಶ್ರಯ ಮಾಡದಿದ್ದರೆ ಎನಗೇ ಆಣೆ ರಂಗ ||
ಪುರಂದರ ವಿಠಲ ನೀನೊಲಿಯದಿದ್ದರೆ ನಿನಗೇ ಆಣೆ ||೫||

enagU ANe raMga ninagU ANe ||pa||
enagU ninagU ibbarigU ninna BaktarANe ||apa||
 
ninna biTTu anyara Bajisidare enagE ANe raMga ||
enna nI kai biTTu hOdare ninagE ANe ||1||
 
tanumana dhanadali vaMcakanAdare enagE ANe raMga ||
manasu ninnali nilisadiddare ninagE ANe ||2||
 
kAku manujara saMgava mADidare enage ANe raMga ||
laukikava biDisadiddare ninagE ANe ||3||
 
SiShTara saMgava mADadiddare enagE ANe raMga ||
duShTara saMgava biDisadiddare ninagE ANe ||4||
 
hari ninnASraya mADadiddare enagE ANe raMga ||
puraMdara viThala nInoliyadiddare ninagE ANe ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru