ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಗೋದೆ ಅತಿ ಪುಣ್ಯ ಸಾಧೇ | ವಿಜಯವಿಠಲ | Gode Ati Punya Saadhe | Vijaya Vithala


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ಗೋದೆ ಅತಿ ಪುಣ್ಯ ಸಾಧೇ ಮಾಧವನ ಚರಣಾರವಿಂದೇ ಪಾದೆ ||ಪ||

ಇದ್ದಲ್ಲಿ ನಿನ್ನ ಸ್ಮರಣೆಯನು ಮಾಡಲು ಪಾಪ 
ಎದ್ದೋಡಿ ತಿರುಗಿ ನೋಡದೆ ಹೋಹವು
ಸದ್ಭಕ್ತಿಯಿಂದ ನಿನ್ನನು ನೋಡಬೇಕೆನುತ
ಉದ್ಯುಕ್ತವಾಗೆ ಬ್ರಹ್ಮತ್ಯ ಪರಿಹಾರವು ||೧||

ಬಂದು ಹರುಷದಲಿ ಕಣ್ಣಲಿ ಕಂಡು ಶಿರಬಾಗಿ 
ವಂದನೆಯ ಮಾಡಿ ಸಾಷ್ಟಾಂಗೆರಗಲೂ
ಹಿಂದಣ ಶತಕೋಟಿ ದುರಿತ ರಾಶಿಗಳೆಲ್ಲ
ಒಂದೂ ಉಳಿಯದಂತೆ ಬೆಂದು ಹೋಹವು ||೨||

ಅತಿ ವೇಗದಿಂದ ಬಂದು ಸ್ನಾನ ಮಾಡಲು
ಮತಿವಂತರನ ಮಾಡಿ ದುರ್ಮಾರ್ಗ ಬಿಡಿಸಿ
ರತಿಪತಿ ಜನಕ ಸಿರಿ ವಿಜಯವಿಠಲನ್ನ
ಸ್ತುತಿಸಿ ಗತಿ ಪಡೆವಂತೆ ಧನ್ಯರ ಮಾಡುವ ತಾಯಿ ||೩||

gOde ati puNya saadhE maadhavana charaNaaraviMdE paade ||pa||

iddalli ninna smaraNeyanu maaDalu paapa 
eddODi tirugi nODade hOhavu
sadbhaktiyiMda ninnanu nODabEkenuta
udyuktavaage brahmatya parihaaravu ||1||

baMdu haruShadali kaNNali kaMDu shirabaagi 
vaMdaneya maaDi saaShTaaMgeragalU
hiMdaNa shatakOTi durita raashigaLella
oMdU uLiyadaMte beMdu hOhavu ||2||

ati vEgadiMda baMdu snaana maaDalu
mativaMtarana maaDi durmaarga biDisi
ratipati janaka siri vijayaviThalanna
stutisi gati paDevaMte dhanyara maaDuva taayi ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru