ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಹ್ಯಾಂಗೆ ಕೊಟ್ಟನು ಹೆಣ್ಣ | ಹಯವದನ | Hyange Kottanu Henna | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


 ಹ್ಯಾಂಗೆ ಕೊಟ್ಟನು ಹೆಣ್ಣ ಸಾಗರನು ಈ ವರಗೆ ||ಪ||

ಶೃಂಗಾರ ಪುರುಷರು ಬಹುಮಂದಿಯಿರಲು ||ಅಪ||

ಗುಷ್ಟುನಾರುವ ಮೈಯ್ಯಿ ಬಿಟ್ಟಿದ್ದ ಬಿರುಗಣ್ಣು
ಮುಟ್ಟಿನೋಡಿದರೆ ಮೈಯ್ಯತಿ ಕಠಿಣವು
ಸೊಟ್ಟಮೋರೆಯು ಇವಗೆ ಎಷ್ಟುದ್ದ ಹಲ್ಲುಗಳು
ಇಷ್ಟು ಘೋರಮುಖದಳಿಯನೆಲ್ಲಿ ದೊರಕಿದನೊ || ೧ ||

ಬಡವನು ಭಿಕ್ಷುಕನು ಬಡಬನಂದದಿ ಕೋಪವು
ನೋಡಿದರೆ ತಲೆಯು ಜಟೆ ಕಟ್ಟಿಹುದು
ಬೆಡಗು ನುಡಿಗಾರ ಜಾರ ಚೋರನಿಗೆ
ನೋಡಿ ನೋಡಿ ಹೆಣ್ಣನ್ನು ಹ್ಯಾಂಗೆ ಕೊಟ್ಟನು || ೨ ||

ಭಂಡನಾಗಿರುವನು ಕಂಡವರೊಡನೆ ಕಾಳಗವ
ಕೊಂಡು ಬಹು ಬಲು ಉದ್ದಂಡನಿವನು
ಅಂಡಜವಾಹನಗೆ ಯೋಗ್ಯವಾದ ಹೆಣ್ಣ
ಕಂಡು ಕಂಡೀ ಹಯವದನಗೆ ಕೊಟ್ಟನ್ಹ್ಯಾಂಗೆ || ೩ ||

hyaaMge koTTanu heNNa saagaranu I varage ||pa||

shRuMgaara puruSharu bahumaMdiyiralu ||apa||

guShTunaaruva maiyyi biTTidda birugaNNu
muTTinODidare maiyyati kaThiNavu
soTTamOreyu ivage eShTudda hallugaLu
iShTu ghOramuKadaLiyanelli dorakidano || 1 ||

baDavanu bhikShukanu baDabanaMdadi kOpavu
nODidare taleyu jaTe kaTTihudu
beDagu nuDigaara jaara cOranige
nODi nODi heNNannu hyaaMge koTTanu || 2 ||

bhaMDanaagiruvanu kaMDavaroDane kaaLagava
koMDu bahu balu uddaMDanivanu
aMDajavaahanage yOgyavaada heNNa
kaMDu kaMDI hayavadanage koTTan~hyaaMge || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru