ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕೃಷ್ಣಾ ಕೃಷ್ಣಾ ಕೃಷ್ಣಾ ಎಂದು | ಸಿರಿ ಕೃಷ್ಣ | Krishna Krishna Krishna Endu | Sri Vyasarajaru


ಸಾಹಿತ್ಯ :    ಶ್ರೀ ವ್ಯಾಸರಾಜರು  (ಶ್ರೀ ಕೃಷ್ಣ)
Kruti: Sri Vyasarajaru (Sri Krishna)


ಕೃಷ್ಣಾ ಕೃಷ್ಣಾ ಕೃಷ್ಣಾ ಎಂದು ಮೂರು ಬಾರಿ ನೆನೆಯಿರೋ ||ಪ||
ಸಂತುಷ್ಟನಾಗಿ ಮುಕುತಿಕೊಟ್ಟು ಮಿಕ್ಕ ಭಾರ ಹೊರುವನೋ ||ಅಪ||

ಸಕಲ ವೇದ ಶಾಸ್ತ್ರ ಪಠಿಸಿ ಸಾರವನ್ನು ತಿಳಿದರೇನು |
ಮಕರ ಕುಂಡಲಧರನ ನಾಮಕ್ಕೆ ಸರಿಯಿಲ್ಲವೋ ||೧||

ಕಮಲನಾಭನ ಚಿಹ್ನೆಯನ್ನು ಧರಿಸಿಕೊಂಡು ಮೆರೆಯಿರೋ ||
ಯಮನ ಭಟರು ನೋಡಿ ಅಂಜಿ ಅಡವಿಗೆ ಹೋಗುವರೋ ||೨||

ಜನ್ಮವೆತ್ತಿ ಮಧ್ವಮತವ ಅನುಸರಿಸಿ ನಡೆಯಿರೋ |
ಸುಮ್ಮಾನದಿ ಸಿರಿ ಕೃಷ್ಣ ತನ್ನ ಲೋಕ ಕೊಡುವನೋ ||೩||

kRuShNA kRuShNA kRuShNA eMdu mUru bAri neneyirO ||pa||
saMtuShTanAgi mukutikoTTu mikka BAra horuvanO ||apa||
 
sakala vEda SAstra paThisi sAravannu tiLidarEnu |
makara kuMDaladharana nAmakke sariyillavO ||1||
 
kamalanABana cihneyannu dharisikoMDu mereyirO ||
yamana BaTaru nODi aMji aDavige hOguvarO ||2||
 
janmavetti madhvamatava anusarisi naDeyirO |
summaanadi siri kRuShNa tanna lOka koDuvanO ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru