ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮೆರೆದೆ ಮಹಿಮೆ ಉದಾರ | ಹಯವದನ | Merede Maime Udaara | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಮೆರೆದೆ ಮಹಿಮೆ ಉದಾರ ನಮ್ಮ
ಗುರು ಭೀಮಸೇನ ಸುಧೀರ ||ಪ||

ಮಂಗಳಮಹಿಮ ವಿಹಾರ ಮಾಯವಾದಿಗಳಿಗತಿಕ್ರೂರ ||ಅಪ||

ಹರಿಯ ನಿರೂಪವ ಧರಿಸಿ ಮರುತ ಕುಂತಿಯೊಳವತರಿಸಿ
ಹರನೊಳು ವಾದಿಸಿ ಜೈಸಿ ಹರಿಸರ್ವೋತ್ತಮನೆಂದೆನಿಸಿ ||೧||

ಬಕ ಹಿಡಿಂಬಕ ಜರಾಸುತರ ಮಣಿಮಂತ ಕೀಚಕ ದುರ್ಜನರ
ಸಕಲ ಕೌರವ ಅತಿರಥರ ಕೊಂದು ಸುಖ ಪಡಿಸಿದೆ ಸಹೋದರರ ||೨||

ಜ್ಞಾನಭಕುತಿಸಂಪನ್ನ ಅಜ್ಞಾನಾರಣ್ಯಛೇದನ ಮುದ್ದು
ಜ್ಞಾನೇಂದ್ರ ಹಯವದನನ್ನ ಧ್ಯಾನದೊಳಿರಿಸು ಪ್ರಸನ್ನ ||೩||

merede mahime udaara namma
guru bhImasEna sudhIra ||pa||

maMgaLamahima vihaara maayavaadigaLigatikrUra ||apa||

hariya nirUpava dharisi maruta kuMtiyoLavatarisi
haranoLu vaadisi jaisi harisarvOttamaneMdenisi ||1||

baka hiDiMbaka jaraasutara maNimaMta kIchaka durjanara
sakala kourava atirathara koMdu sukha paDiside sahOdarara ||2||

jnaanabhakutisaMpanna ajnaanaaraNyaChEdana muddu
jnaanEMdra hayavadananna dhyaanadoLirisu prasanna ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru