ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಮೋ ನಮೋ ವೆಂಕಟೇಶ | ಗುರು ಮಹಿಪತಿ | Namo Namo Venkatesha | Guru Mahipati Dasaru


ಸಾಹಿತ್ಯ :    ಶ್ರೀ ಗುರು ಮಹಿಪತಿ ದಾಸರು
Kruti: Sri Guru Mahipati Dasaru


ನಮೋ ನಮೋ ವೆಂಕಟೇಶ ನಮೋ ನಮೋ ವೆಂಕಟೇಶ  
ನಮೋ ನಮೋ ವೆಂಕಟೇಶ ನಮೋ ನಮೋ ವೆಂಕಟೇಶ | |ಪ||    

ವೈಕುಂಠ ಮಂದಿರಾ ಶೇಷಾಚಲದಲಿ ಬೇಕೆಂದು ಮಾಡಿದೆ ನೆಲೆವಾಸ ||೧||   

ಶ್ರೀದೇವಿ ಸಂಗಡ ಸ್ವಾಮಿ ಪುಷ್ಕರಣಿ ತೀರದಿ ಮೋದದಿ ಕ್ರೀಡಿಪ ವಿಲಾಸ ||೨||   

ಗುರು ಮಹಿಪತಿ ಪ್ರಭು ಚರಣ ನಂಬಿದವರ ಧರೆಯೊಳು ಪೂರೈಸು ಮನದಾಶ ||೩|| 

namO namO veMkaTESa namO namO veMkaTESa  
namO namO veMkaTESa namO namO veMkaTESa ||pa||    

vaikuMTha maMdirA SEShAcaladali bEkeMdu mADide nelevAsa ||1||   

SrIdEvi saMgaDa svAmi puShkaraNi tIradi mOdadi krIDipa vilAsa ||2||   

guru mahipati praBu caraNa naMbidavara dhareyoLu pUraisu manadASa ||3|| 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru