ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಾರಾಯಣ ನಾರಾಯಣ | ಹಯವದನ | Narayana Narayana | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ನಾರಾಯಣ ನಾರಾಯಣ 
ನಾರಾಯಣ ನಳಿನೋದರ ||ಪ||

ನಾರದಪ್ರಿಯ ನಾಮ ಜಯ
ನಾರಾಯಣ ನರಕಾಂತಕ ||ಅಪ||

ಸುರಸಂಚಯ ಸುಖಕಾರಣ ದಿತಿಜಾಂತಕ ದೀನಶರಣ
ಪರಾತ್ಪರ ಪಾಂಡವಪ್ರಿಯ ಪರಿಪೂರ್ಣ ಪರಮಜಯ ||೧||

ಅಘಕುಲವನ ದಾವಾನಲ ಅಗಣಿತಗುಣಗಣ ನಿರ್ಮಲ
ತ್ರಿಗುಣಾತೀತ ತ್ರಿಭುವನ ತ್ರಿದಶೇಶ್ವರವಂದ್ಯ ಜಯ ||೨||

ಅತಿ ಮೋಹನಚರಿತ ನಮೋ ಅತಿ ಸದ್ಗುಣಭರಿತ ನಮೋ
ಹತ ಕಲ್ಮಶ ಹಯವದನ ಹರಿ ಹಯರಿಪುಹರಣ ಜಯ ||೩|| 

naaraayaNa naaraayaNa 
naaraayaNa naLinOdara ||pa||

naaradapriya naama jaya
naaraayaNa narakaaMtaka ||apa||

surasaMchaya sukhakaaraNa ditijaaMtaka dInasharaNa
paraatpara paaMDavapriya paripUrNa paramajaya ||1||

aghakulavana daavaanala agaNitaguNagaNa nirmala
triguNaatIta tribhuvana tridashEshwaravaMdya jaya ||2||

ati mOhanacharita namO ati sadguNabharita namO
hata kalmasha hayavadana hari hayaripuharaNa jaya ||3|| 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru