ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಒಲ್ಲನೋ ಹರಿ ಕೊಳ್ಳನೋ | ಪುರಂದರ ವಿಠಲ | Ollano Hari Kollano | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಒಲ್ಲನೋ ಹರಿ ಕೊಳ್ಳನೋ ||ಪ||
ಎಲ್ಲ ಸಾಧನವಿದ್ದು ತುಳಸಿ ಇಲ್ಲದ ಪೂಜೆ ||ಅಪ||

ಸಿಂಧು ಶತಕೋಟಿ ಗಂಗೋದಕವಿದ್ದು |
ಗಂಧ ಸುಪರಿಮಳ ವಸ್ತ್ರವಿದ್ದು |
ಚಂದುಳ್ಳ ಆಭರಣ ಧೂಪದೀಪಗಳಿದ್ದು |
ಬೃಂದಾವನ ಶ್ರೀ ತುಳಸಿ ಇಲ್ಲದ ಪೂಜೆ ||೧||

ದಧಿ ಕ್ಷೀರ ಮೊದಲಾದ ಅಭಿಷೇಕಗಳಿದ್ದು |
ಮಧುಪರ್ಕ ಪಂಚೋಪಚಾರವಿದ್ದು |
ಮುದದಿಂದ ಮುದ್ದು ಶ್ರೀ ಕೃಷ್ಣನ ಪೂಜೆಗೆ |
ಸದಮಲಳಾದ ಶ್ರೀ ತುಳಸಿ ಇಲ್ಲದ ಪೂಜೆ ||೨||

ಮಂತ್ರ ಮಹಾಮಂತ್ರ ಪುರುಷಸೂಕ್ತಗಳಿದ್ದು |
ತಂತು ತಪ್ಪದೆ ತಂತ್ರ ಸಾರವಿದ್ದು ||
ಸಂತತ ಸುಖ ಸಂಪೂರ್ಣನ ಪೂಜೆಗೆ |
ಅತ್ಯಂತ ಪ್ರಿಯಳಾದ ತುಳಸಿ ಇಲ್ಲದ ಪೂಜೆ ||೩||

ಕಮಲ ಮಲ್ಲಿಗೆ ಜಾಜಿ ಸಂಪಿಗೆ ಕೇದಿಗೆ |
ವಿಮಲ ಘಂಟೆ ಪಂಚ ವಾದ್ಯವಿದ್ದು ||
ಅಮಲ ಪಂಚ ಭಕ್ಷ್ಯ ಪರಮಾನ್ನಗಳಿದ್ದು |
ಕಮಲನಾಭನು ಒಲ್ಲ ತುಳಸಿ ಇಲ್ಲದ ಪೂಜೆ ||೪||

ಪೂಜೆಯ ಮಾಡದೆ ತುಳಸಿ ಮಂಜರಿಯಿಂದ |
ಮೂಜಗದೊಡೆಯ ಮುರಾರಿಯನು ||
ರಾಜಾಧಿರಾಜನೆಂಬ ಮಂತ್ರ ಪುಷ್ಪಗಳಿಂದ 
ಪೂಜಿಸಿದರು ಒಲ್ಲ ಪುರಂದರ ವಿಠಲನು ||೫||

ollanO hari koLLanO ||pa||
ella sAdhanaviddu tuLasi illada pUje ||apa||
 
siMdhu SatakOTi gaMgOdakaviddu |
gaMdha suparimaLa vastraviddu |
caMduLLa ABaraNa dhUpadIpagaLiddu |
bRuMdAvana SrI tuLasi illada pUje ||1||
 
dadhi kShIra modalAda aBiShEkagaLiddu |
madhuparka paMcOpacAraviddu |
mudadiMda muddu SrI kRuShNana pUjege |
sadamalaLAda SrI tuLasi illada pUje ||2||

maMtra mahAmaMtra puruShasUktagaLiddu |
taMtu tappade taMtra sAraviddu ||
saMtata suKa saMpUrNana pUjege |
atyaMta priyaLAda tuLasi illada pUje ||3||

kamala mallige jAji saMpige kEdige |
vimala GaMTe paMca vAdyaviddu ||
amala paMca BakShya paramAnnagaLiddu |
kamalanABanu olla tuLasi illada pUje ||4||
 
pUjeya mADade tuLasi maMjariyiMda |
mUjagadoDeya murAriyanu ||
rAjAdhirAjaneMba maMtra puShpagaLiMda 
pUjisidaru olla puraMdara viThalanu ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru