ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಪಾನವ ಮಾಡುವೆನು | ಹಯವದನ | Paanava Maduvenu | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಪಾನವ ಮಾಡುವೆನು ನಾ ಮನದಣಿಯ 
ನಾಮಾಮೃತವ ಪಾನವ ಮಾಡುವೆನು ||ಪ||

ಶ್ರೀನಿವಾಸನ ನಾಮಸುಧಾರಸ
ಏನು ರುಚಿಯೋ ಕಾಣೆ ಜೇನುತುಪ್ಪದಂತೆ ||೧|| 

ಸಕ್ಕರೆ ಬೆರೆಸಿದ ಚೊಕ್ಕಪಾನಕವನ್ನು
ಮಿಕ್ಕು ಮೀರುತಲಿದೆ ರಕ್ಕಸಾರಿಯ ಧ್ಯಾನ ||೨|| 

ಕದಳಿ ಖರ್ಜೂರ ದ್ರಾಕ್ಷಿ ಅಡಕೆಯಿಮ್ಮಿಗಿಲಾಗಿ
ಮುದಕೊಡುವುದು ಜಿಹ್ವೆಗೊದಗಿದ ತತ್ ಕ್ಷಣ ||೩|| 

ಕಾಸಿದ ಕೆನೆಹಾಲ ದೂಷಿಸುವಂತಿದೆ 
ಏಸು ರುಚಿಯೋ ಹರಿದಾಸರೆ ಬಲ್ಲರು ||೪|| 

ಹಯವದನನ ನಿರ್ಭಯದಿಂ ಭಜಿಸಲು 
ದಯಮಾಡುವ ಸಾಯುಜ್ಯಪದವನಿತ್ತು ||೫|| 

paanava maaDuvenu naa manadaNiya 
naamaamRutava paanava maaDuvenu ||pa||

shrInivaasana naamasudhaarasa
Enu ruciyO kaaNe jEnutuppadaMte ||1|| 

sakkare beresida cokkapaanakavannu
mikku mIrutalide rakkasaariya dhyaana ||2|| 

kadaLi kharjUra draakShi aDakeyimmigilaagi
mudakoDuvudu jihvegodagida tat kShaNa ||3|| 

kaasida kenehaala dUShisuvaMtide 
Esu ruciyO haridaasare ballaru ||4|| 

hayavadanana nirBayadiM bhajisalu 
dayamaaDuva saayujyapadavanittu ||5|| 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru