ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಶಿವ ಶಿವ ಶಿವ ಎನ್ನಿರೋ | ಆದಿಕೇಶವ | Shiva Shiva Shiva Enniro | Sri Kanakadasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanakadasaru


ಶಿವ ಶಿವ ಶಿವ ಎನ್ನಿರೋ 
ಮೂರ್ಜಗದವರೆಲ್ಲ ಶಿವ ಶಿವ ಶಿವ ಎನ್ನಿರೋ ||ಪ||   

ಆಗಮ ಸಿದ್ಧಾಂತ ಮೂಲದ ಜಪವಿದು | 
ನಿಮ್ಮ ರೋಗದ ಮೂಲವ ಕೆಡಿಪ ಔಷಧವಿದು ||೧||   

ಮನುಜ ಜನ್ಮದಿ ಹುಟ್ಟಿ ಮೈ ಮರೆದಿರ ಬೇಡಿ 
ನಿಮ್ಮ | ತನು ಮನ ಪ್ರಾಣವ ವ್ಯರ್ಥವ ಮಾಡದೆ ||೨||   

ಅಪರಾಧದ ಕೋಟಿ ತ್ಯಜಿಸಬೇಕಾದರೆ 
ಮುಂದೆ ಉಪಮಿತರೊರ್ವಿತರರಿಯದ ಜಪವಿದು ||೩||   

ಜವನ ಬಾಧೆಯ ನೀನು ಜಯಿಸಬೇಕಾದರೆ | 
ನಿಜ ಸುವಿಮಲ ಮುಕ್ತಿಯ ಪಡೆಯಬೇಕಾದರೆ ||೪||   

ಭುವನಕೆ ಬಲ್ಲಿದನಾಗ ಬೇಕಾದರೆ ನೀವು | 
ಭುವನ ಪದವಿಯನು ಪಡೆಯಬೇಕಾದರೆ ||೫||   

ಗುರುಲಿಂಗ ಜಂಗಮನ ಅರಿಯ ಬೇಕಾದರೆ | 
ಮುಂದೆ ಪರಮಾತ್ಮನ ನೀವು ತಿಳಿಯಬೇಕಾದರೆ ||೬||   

ಪೃಥ್ವಿಗೆ ಸದ್ಗುರುನಾಗ ಬೇಕಾದರೆ ನೀವು | 
ತತ್ತ್ವಪತಿ ಆದಿಕೇಶವನ ಕೂಡಬೇಕಾದರೆ ||೭||

Siva Siva Siva ennirO 
mUrjagadavarella Siva Siva Siva ennirO ||pa||   

Agama siddhAMta mUlada japavidu | 
nimma rOgada mUlava keDipa auShadhavidu ||1||   

manuja janmadi huTTi mai maredira bEDi Siva nimma | 
tanu mana prANava vyarthava mADade ||2||   

aparAdhada kOTi tyajisabEkAdare 
muMde upamitarorvitarariyada japavidu ||3||   

javana bAdheya nInu jayisabEkAdare | 
nija suvimala muktiya paDeyabEkAdare ||4||   

Buvanake ballidanAga bEkAdare nIvu | 
Buvana padaviyanu paDeyabEkAdare ||5||   

guruliMga jaMgamana ariya bEkAdare | 
muMde paramAtmana nIvu tiLiyabEkAdare ||6||   

pRuthvige sadgurunAga bEkAdare nIvu | 
tattvapati AdikESavana kUDabEkAdare ||7||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru