ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಅನುಭವದಡುಗೆಯ ಮಾಡಿ | ಪುರಂದರ ವಿಠಲ | Anubhavadadugeya Madi | Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ) Kruti: Sri Purandara Dasaru (Purandara vittala)


ಅನುಭವದಡುಗೆಯ ಮಾಡಿ | ಅದಕ್ಕನುಭವಿಗಳು ಬಂದು ನೀವೆಲ್ಲ ಕೂಡಿ ||ಪ|| ತನುವೆಂಬ ಭಾಂಡವ ತೊಳೆದು | ಕೆಟ್ಟ ಮನದ ಚಂಚಲವೆಂಬ ಮುಸುರೆಯ ತೊಳೆದು || ಘನವಾಗಿ ಮನೆಯನ್ನು ಬಳಿದು | ಅಲ್ಲಿ ಮಿನುಗುವ ತ್ರಿಗುಣದ ಒಲೆಗುಂಡ ನಡೆದು ||೧|| ವಿರಕ್ತಿಯೆಂಬುವ ಮಡಿಯುಟ್ಟು | ಪೂರ್ಣ ಹರಿಭಕ್ತಿಯೆಂಬ ನೀರನ್ನೆಸರಿಟ್ಟು || ಅರಿವೆಂಬ ಬೆಂಕಿಯ ಕೊಟ್ಟು | ಮಾಯಾ ಮಧವೆಂಬ ಕಾಷ್ಟವ ಮುದದಿಂದ ಸುಟ್ಟು ||೨|| ಶರಣೆಂಬ ಸಾಮಗ್ರಿ ಹೂಡಿ | ಮೋಕ್ಷ ಪರಿಕಾರವಾದಂಥ ಪಾಕವ ಮಾಡಿ || ಗುರು ಶರಣರು ಸವಿದಾಡಿ | ನಮ್ಮ ಪುರಂದರ ವಿಠಲನ ಬಿಡದೆ ಕೊಂಡಾಡಿ ||೩|| anuBavadaDugeya mADi | adakkanuBavigaLu baMdu nIvella kUDi ||pa|| tanuveMba BAMDava toLedu | keTTa manada caMcalaveMba musureya toLedu || GanavAgi maneyannu baLidu | alli minuguva triguNada oleguMDa naDedu ||1|| viraktiyeMbuva maDiyuTTu | pUrNa hariBaktiyeMba nIrannesariTTu || ariveMba beMkiya koTTu | mAyA madhaveMba kAShTava mudadiMda suTTu ||2|| SaraNeMba sAmagri hUDi | mOkSha parikAravAdaMtha pAkava mADi || guru SaraNaru savidADi | namma puraMdara viThalana biDade koMDADi ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru