ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಅರಿಯರು ಮನುಜರರಿಯರು | ಪುರಂದರವಿಠ್ಠಲ | Ariyaru Manujarariyaru | Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಅರಿಯರು ಮನುಜರರಿಯರು |ಪ|

ಅರಿಯರು ಮನುಜರು ಅರಿತೂ ಅರಿಯರು| 
ಧರೆ ಈರೇಳಕ್ಕೆ ಹರಿಯಲ್ಲದಿಲ್ಲವೆಂದು |ಅಪ|

ನಾರದ ಮುನಿ ಬಲ್ಲ ವಾರಿಜೋದ್ಭವ ಬಲ್ಲ| 
ಪರಾಶರ ಬಲ್ಲ ಮನು ಬಲ್ಲನು|
ಧೀರ ಭೀಷ್ಮನು ಬಲ್ಲ ಪಾರ್ವತಿ ಬಲ್ಲಳು 
ಕಾರಣೀಕನು ಶ್ರೀ ಹರಿಯಲ್ಲದಿಲ್ಲವೆಂದು |೧|

ಶಿವ ಬಲ್ಲ ಧ್ರುವ ಬಲ್ಲ ದ್ರೌಪದಿ ಬಲ್ಲಳು| 
ಅವನೀಪಾಲಕ ಜನಕನೃಪ ಬಲ್ಲನು|
ಯುವತಿಗೆ ಶಾಪವಿತ್ತ ಗೌತಮ ಮುನಿ ಬಲ್ಲ| 
ಭವ ರೋಗ ವೈದ್ಯ ಶ್ರೀಹರಿಯಲ್ಲದಿಲ್ಲವೆಂದು |೨|

ದಿಟ್ಟ ಪ್ರಹ್ಲಾದ ಬಲ್ಲ ಕೆಟ್ಟ ಅಜಮಿಳ ಬಲ್ಲ| 
ಸಿಟ್ಟಿನಿಂದಲಿ ಒದ್ದ ಭೃಗು ಬಲ್ಲನು|
ಕೊಟ್ಟ ಬಲಿ ಬಲ್ಲ ಮೊರೆಯಿಟ್ಟ ಗಜೇಂದ್ರ ಬಲ್ಲ| 
ಸೃಷ್ಟೀಶ ಪುರಂದರ ವಿಠ್ಠಲನಲ್ಲದಿಲ್ಲವೆಂದು |೩|

ariyaru manujarariyaru |pa|

ariyaru manujaru aritU ariyaru| 
dhare IrELakke hariyalladillaveMdu |apa|

nArada muni balla vArijOdBava balla| 
parASara balla manu ballanu|
dhIra BIShmanu balla pArvati ballaLu 
kAraNIkanu SrI hariyalladillaveMdu |1|

Siva balla dhruva balla draupadi ballaLu| 
avanIpAlaka janakanRupa ballanu|
yuvatige SApavitta gautama muni balla| 
Bava rOga vaidya SrIhariyalladillaveMdu |2|

diTTa prahlAda balla keTTa ajamiLa balla| 
siTTiniMdali odda BRugu ballanu|
koTTa bali balla moreyiTTa gajEMdra balla| 
sRuShTISa puraMdara viThThalanalladillaveMdu |3|

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru