ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಎಲ್ಲಾನು ಬಲ್ಲೆನೆಂಬುವಿರಲ್ಲ | ಪುರಂದರ ವಿಠಲ | Ellanu Ballenembuviralla | Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಎಲ್ಲಾನು ಬಲ್ಲೆನೆಂಬುವಿರಲ್ಲ |
ಅವಗುಣ ಬಿಡಲಿಲ್ಲ ||ಪ||

ಸೊಲ್ಲಿಗೆ ಶರಣರ ಕಥೆಗಳ ಪೇಳುತ |
ಅಲ್ಲದ ನುಡಿಯನು ನುಡಿಯುವಿರಲ್ಲ ||ಅಪ||

ಕಾವಿಯನುಟ್ಟು ತಿರುಗುವಿರಲ್ಲ ಕಾಮವ ಬಿಡಲಿಲ್ಲ |
ನೇಮನಿಷ್ಠೆಗಳ ಮಾಡುವಿರಲ್ಲ ತಾಮಸ ಬಿಡಲಿಲ್ಲ ||
ತಾವೊಂದರಿಯದೆ ಪರರನು ತಿಳಿಯದೆ |
ಸ್ವಾನನ ಕುಳಿಯಲಿ ಬೀಳುವಿರಲ್ಲ ||೧||

ಗುರುಗಳ ಸೇವೆ ಮಾಡುವಿರಲ್ಲ ಗುರುತಾಗಲಿಲ್ಲ |
ಪರಿ ಪರಿ ದೇಶವ ತಿರುಗುವಿರಲ್ಲ ಪೊರೆಯುವರಿನ್ನಿಲ್ಲ |
ಅರಿವೊಂದರಿಯದೆ ಆಗಮ ತಿಳಿಯದೆ |
ನರಕ ಕೂಪದಲಿ ಬೀಳುವಿರಲ್ಲ ||೨||

ಬ್ರಹ್ಮ ಜ್ಞಾನಿಗಳು ಎನಿಸುವಿರಲ್ಲ ಹಮ್ಮು ಬಿಡಲಿಲ್ಲ |
ಸುಮ್ಮನೆ ಯಾಗವ ಮಾಡುವಿರಲ್ಲ ಸುಳ್ಳನು ಬಿಡಲಿಲ್ಲ |
ಗಮ್ಮನೆ ಪುರಂದರ ವಿಠಲನ ಪಾದಕೆ |
ಹೆಮ್ಮೆ ಬಿಟ್ಟು ನೀವೆರಗಲೇ ಇಲ್ಲ ||೩||

ellAnu balleneMbuviralla |
avaguNa biDalilla ||pa||
 
sollige SaraNara kathegaLa pELuta |
allada nuDiyanu nuDiyuviralla ||apa||
 
kAviyanuTTu tiruguviralla kAmava biDalilla |
nEmaniShThegaLa mADuviralla tAmasa biDalilla ||
tAvoMdariyade pararanu tiLiyade |
svAnana kuLiyali bILuviralla ||1||
 
gurugaLa sEve mADuviralla gurutAgalilla |
pari pari dESava tiruguviralla poreyuvarinnilla |
arivoMdariyade Agama tiLiyade |
naraka kUpadali bILuviralla ||2||
 
brahma j~jAnigaLu enisuviralla hammu biDalilla |
summane yAgava mADuviralla suLLanu biDalilla |
gammane puraMdara viThalana pAdake |
hemme biTTu nIveragalE illa ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru