ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನರಸಿಂಹ ವಜ್ರಸಿಂಹ | ವಿಜಯವಿಠ್ಠಲ | Narasimha Vajrasimha | Sri Vijaya Dasaru


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ನರಸಿಂಹ ವಜ್ರಸಿಂಹ | 
ಸರಸಿಜನಾಭ ದಕ್ಷಿಣ ಶರಧಿ ನಿವಾಸ ||ಪ||

ಹಿರಣ್ಯಕಶ್ಯಪು ಪ್ರಹ್ಲಾದನಾ ಬಾಧಿಸಲು| 
ಪರಿಯದೈವವೆ | ಮೊರೆ ಹೋಗಲು 
ಹಿರಿದಾಗಿ ಕೇಳಿ ಹಿತದಲಿ ಬಂದು ಬೊಬ್ಬಿಡಲು| 
ಹಿರಣ್ಯಗರ್ಭಾದಿಗಳು ಹಿರಿದು ಚಿಂತಿಸಲು ||೧||

ಭುಗಿಲೆನೆ ಧಿಗಿಲನೆ ದಿಕ್ಕಿನಲಿ ಶಬ್ಧ ಪುಟ್ಟುತಿರೆ 
ಪಗಲಿರುಳು ಒಂದೆಂದರು ಸಕಲರು 
ಝಗಝಗಿಪ ಬೆಳಕು ಕವಿದುದು ಮೂರುಲೋಕಕ್ಕೆ 
ಉಗುರುಕೊನೆ ಪೊಗಳಿ ವೇದಗಳು ಬೆರಗಾಗಿ ||೨||

ರಕ್ಕಸನೊಡಲು ಬಗೆದು ಕರುಳು ಕೊರಳಿಗೆ ಮಾಲೆ| 
ಇಕ್ಕಿ ಭಕ್ತಗೆ ಮೆಚ್ಚಿ ವರವನಿತ್ತ 
ಕಕ್ಕಸದ ದೈವ ಅನಂತಪದುಮನಾಭ 
ಮುಕ್ತಿದಾಯಕ ವಿಜಯವಿಠ್ಠಲ ಮಹದಾ ||೩||

narasiMha vajrasiMha | 
sarasijanABa dakShiNa Saradhi nivAsa ||pa||

hiraNyakashyapu prahlAdanA bAdhisalu| 
pariyadaivave | more hOgalu 
hiridAgi kELi hitadali baMdu bobbiDalu| 
hiraNyagarBAdigaLu hiridu ciMtisalu ||1||
 
Bugilene dhigilane dikkinali Sabdha puTTutire 
pagaliruLu oMdeMdaru sakalaru 
JagaJagipa beLaku kavidudu mUrulOkakke 
ugurukone pogaLi vEdagaLu beragAgi ||2||

rakkasanoDalu bagedu karuLu koraLige mAle| 
ikki Baktage mecci varavanitta 
kakkasada daiva anaMtapadumanABa 
muktidAyaka vijayaviThThala mahadA ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru