ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಯಾರು ಒಲಿದರೇನು | ಪುರಂದರ ವಿಠಲ | Yaaru Olidarenu | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಯಾರು ಒಲಿದರೇನು ನಮಗಿನ್ನಾರು ಮುನಿದರೇನು ||ಪ||
ಕ್ಷೀರ ಸಾಗರಶಾಯಿಯಾದವನ ಸೇರಿದಂಥ ಹರಿದಾಸರಿಗೆ ||ಅಪ||

ಊರನಾಳುವ ದೊರೆಗಳು ನಮ್ಮನು ದೂರ ಅಟ್ಟಿದರೇನು
ಘೋರಾರಣ್ಯದಿ ತಿರುಗುವ ಮೃಗಗಳು ಅಡ್ಡಗಟ್ಟಿದರೇನು
ಮಾರಿ ಹಿಂಡು ಮತ್ತೆ ಮುಸುಕಿನ ದಂಡು ಮೈಗೆ ಮುತ್ತಿದರೇನು
ವಾರಿಜನಾಭನ ವಸುದೇವಸುತನ ಸಾರುವಂಥ ಹರಿದಾಸರಿಗೆ ||೧||

ಪಡೆದ ತಾಯಿ ತಂದೆ ನಮ್ಮೊಳು ಅಹಿತ ಮಾಡಿದರೇನು 
ಮಡದಿ ಮಕ್ಕಳು ಮನೆಯ ನೆಂಟರು ಮುನಿಸುಗುಟ್ಟಿದರೇನು 
ಒಡನಾಡುವ ಗೆಳೆಯರು ನಮ್ಮೊಳಗೆ ವೈರವ ಬೆಳೆಸಿದರೇನು
ಕಡಲಶಯನ ಕರುಣಾನಿಧಿ ನಾಮವು ಒಡಲೊಳಗಿಹ ಹರಿದಾಸರಿಗೆ ||೨||

ಕಾನನದೊಳ್ಹರಿದಾಡುವ ಸರ್ಪವು ಕಾಲಿಗೆ ಸುತ್ತಿದರೇನು 
ಜೇನಿನಂದದಿ ಕೀಟ ಕ್ರಿಮಿಗಳು ಚರ್ಮಕೆ ಮುತ್ತಿದರೇನು
ಭಾನುನಂದನ ಬುಧ ಮಂಗಳರಾ ಬಲವು ತಪ್ಪಿದರೇನು 
ದೀನನಾಥ ಶ್ರೀಪುರಂದರವಿಠಲನ ಧ್ಯಾನವುಳ್ಳ ಹರಿದಾಸರಿಗೆ ||೩||


yaaru olidarEnu namaginnaaru munidarEnu ||pa||
kShIra saagarashaayiyaadavana sEridaMtha haridaasarige ||apa||

UranaaLuva doregaLu nammanu dUra aTTidarREnu
GOraaraNyadi tiruguva mRugagaLu aDDagaTTidarEnu
maari hiMDu matte musukina daMDu maige muttidarEnu
vaarijanaabhana vasudEvasutana saaruvaMtha haridaasarige ||1||

paDeda taayi taMde nammoLu ahita maaDidarEnu 
maDadi makkaLu maneya neMTaru munisuguTTidarEnu 
oDanaaDuva geLeyaru nammoLage vairava beLesidarEnu
kaDalaSayana karuNaanidhi naamavu oDaloLagiha haridaasarige ||2||

kaananadoLharidaaDuva sarpavu kaalige suttidarEnu 
jEninaMdadi kITa krimigaLu carmake muttidarEnu
bhaanunaMdana budha maMgaLaraa balavu tappidarEnu 
dInanaatha SrIpuraMdaraviThalana dhyaanavuLLa haridaasarige ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru