ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಅಂತಕನ ದೂತರಿಗೆ | ಪುರಂದರ ವಿಠಲ | Antakana Dootarige | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಅಂತಕನ ದೂತರಿಗೆ ಕಿಂಚಿತ್ತು ದಯವಿಲ್ಲ |
ಚಿಂತೆಯನು ಬಿಟ್ಟು ಶ್ರೀ ಹರಿಯ ನೆನೆ ಮನವೆ ||ಪ||

ದಿವ ರಾತ್ರಿಯೆನ್ನದೆ ವಿಷಯ ಲಂಪಟನಾಗಿ ಸವಿಯೂಟ |
ಗಳನುಂಡು ಭ್ರಮಿಸಬೇಡ ||
ಅವನ ಕೊಂದಿವನ ಕೊಂದರ್ಥವನು ಗಳಿಸುವರೆ |
ಜವನ ದೂತರು ಬರುವ ಹೊತ್ತ ನೀನರಿಯೆ ||೧||

ಹೊಸ ಮನೆಯ ಕಟ್ಟಿದೆನು ಗೃಹಶಾಂತಿ ಮನೆಯೊಳಗೆ |
ಬಸುರಿ ಹೆಂಡತಿ ಮಗನ ಮದುವೆ ನಾಳೆ ||
ಹಸನಾಗಿ ಇದೆ ಬದುಕು ಸಾಯಲಾರೆನೋ ಎನಲು |
ಕುಸುರಿದರಿಯದೆ ಬಿಡರು ಯಮನವರು ಆಗ ||೨||

ಅಟ್ಟಡುಗೆಯುಣಲಿಲ್ಲ ಇಷ್ಟ ದರುಶನವಿಲ್ಲ |
ಕೊಟ್ಟ ಸಾಲವ ಕೇಳ್ವ ಹೊತ್ತನರಿಯೇ ||
ಕಟ್ಲೆ ತುಂಬಿದ ಮೇಲೆ ಕ್ಷಣ ಮಾತ್ರ ಇರಲಿಲ್ಲ |
ಅಷ್ಟರೊಳು ಪುರಂದರ ವಿಠಲ ಎನು ಮನವೆ ||೩||

aMtakana dUtarige kiMcittu dayavilla |
ciMteyanu biTTu SrI hariya nene manave ||pa||
 
diva rAtriyennade viShaya laMpaTanAgi saviyUTa |
gaLanuMDu BramisabEDa ||
avana koMdivana koMdarthavanu gaLisuvare |
javana dUtaru baruva hotta nInariye ||1||
 
hosa maneya kaTTidenu gRuhaSAMti maneyoLage |
basuri heMDati magana maduve nALe ||
hasanAgi ide baduku sAyalArenO enalu |
kusuridariyade biDaru yamanavaru Aga ||2||
 
aTTaDugeyuNalilla iShTa daruSanavilla |
koTTa sAlava kELva hottanariyE ||
kaTle tuMbida mEle kShaNa mAtra iralilla |
aShTaroLu puraMdara viThala enu manave ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru