ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಾ ರಂಗ ಎನ್ನ | ಪುರಂದರ ವಿಠಲ | Baa Ranga Enna | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಬಾ ರಂಗ ಎನ್ನ ಬಾಯಿಗೆ ಬರಲಿ |
ಹರಿನಾರಾಯಣ ನಿನ್ನ ನಾಮದ ಸ್ಮರಣೆ ||ಅಪ||  

ಕುಳಿತಿರುವಾಗಲು ನಿಂತಿರುವಾಗಲು | 
ಆಡುವಾಗ ನಾ ನಲಿದಾಡುವಾಗ
ಕೇಡುಗತನದಿಂದ ಕೂಡಿದ ಭವದೊಳು | 
ನಾ ಮಾಡಿದ ಪಾಪ ಓಡಿ ಹೋಗುವ ಹಾಗೆ ||೧||

ಕನಸಿನೊಳಾಗಲಿ ಮನಸಿನೊಳಾಗಲಿ | 
ಮನಸು ಕೂಡಿದೊಳು ನಿನ್ನ ನೆನಪಿರಲಿ || 
ಸಂತಸವರ ಶ್ರೀ ಪುರಂದರ ವಿಠಲ | 
ಎನ್ನ ಅಂತ್ಯ ಕಾಲಕ್ಕೊಮ್ಮೆ ನಿನ್ನ ನೆನೆಯುವ ಹಾಗೆ ||೨||

bA raMga enna bAyige barali |
harinArAyaNa ninna nAmada smaraNe ||apa||  

kuLitiruvAgalu niMtiruvAgalu | 
ADuvAga nA nalidADuvAga ||
kEDugatanadiMda kUDida BavadoLu | 
nA mADida pApa ODi hOguva hAge ||1||

kanasinoLAgali manasinoLAgali |
manasu kUDidoLu ninna nenapirali || 
saMtasavara SrI puraMdara viThala | 
enna aMtya kAlakkomme ninna neneyuva hAge ||2||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru