ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಂದ ಕೃಷ್ಣ ಚಂದದಿಂದ | ವಾಸುದೇವ ವಿಠ್ಠಲ | Banda Krishna | Vasudeva Vithala


ರಚನೆ: ಶ್ರೀ ವಾಸುದೇವ ವಿಠ್ಠಲ ದಾಸರು 
Kriti :Sri Vasudeva Vittala Dasaru


ಬಂದ ಕೃಷ್ಣ ಚಂದದಿಂದ| 
ಬಂದ ನೋಡೇ ಗೋಪವೃಂದದಿಂದಾ-
ನಂದಿಸುತ್ತ ಬಂದ ನೋಡೇ ||ಪ||

ಗೋವ ಮೇವನೀವ ದೇವ ಬಂದ ನೋಡೇ| ಸ್ವಾಮಿ 
ದೇವತಾವಾದ್ಯಗಳಿಂದ ಬಂದ ನೋಡೇ ||೧||

ಪಾಪ ಪೋಪ ಗೋಪ ರೂಪ ಬಂದ ನೋಡೇ| ಸ್ವಾಮಿ 
ತಾಪಲೋಪ ಲಾಪಟೋಪ ಬಂದ ನೋಡೇ ||೨||

ಭೂಸುರ ಸುಖ ಸೂಸುತ್ತ ಬಂದ ನೋಡೇ| ಸ್ವಾಮಿ 
ವಾಸುದೇವ ವಿಠ್ಠಲ ತಾ ಬಂದ ನೋಡೇ ||೩||

baMda kRuShNa caMdadiMda| 
baMda nODE gOpavRuMdadiMdA-
naMdisutta baMda nODE ||pa||
 
gOva mEvanIva dEva baMda nODE| svAmi 
dEvatAvAdyagaLiMda baMda nODE ||1||
 
pApa pOpa gOpa rUpa baMda nODE| svAmi 
tApalOpa lApaTOpa baMda nODE ||2||
 
BUsura suKa sUsutta baMda nODE| svAmi 
vAsudEva viThThala tA baMda nODE ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru