ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಭಕ್ತಿ ಬೇಕು ಪರಮ ವಿರಕ್ತಿ ಬೇಕು | ಹಯವದನ | Bhakti Beku Parama Virakti Beku | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)

Kruti:Sri Vadirajaru (Hayavadana)



ನಾರಾಯಣ ನಾರಾಯಣ ನಾರಾಯಣ ನಾರಾಯಣ ||ಪ||

ಭಕ್ತಿ ಬೇಕು ಪರಮ ವಿರಕ್ತಿ ಬೇಕು ಹರಿಸ-
ರ್ವೋತ್ತಮನೆಂಬ ನೆನವಿರಬೇಕು ||೧||

ಅರಿಷಡ್ವರ್ಗದ ವಿಜಯ ಬೇಕು ಗುರುಕುಲತಿಲಕ
ಗುರುಮಧ್ವಮತ ಬೇಕು ಗುರುಭಕ್ತಿ ಬೇಕು ||೨||

ಹರಿಯ ಡಿಂಗರಿಗರ ಸಂಗ ಬೇಕು ಶಂಖಚಕ್ರ -
ಧರನಾಗಿ ಇರಬೇಕು ಸ್ವರೂಪಯೋಗ್ಯತೆ ಬೇಕು ||೩||

ವೇದದಭ್ಯಾಸವು ಬೇಕು ಅದರರ್ಥ ಹರಿಯೆಂಬ
ಬೋಧವಿರಲುಬೇಕು ಖಳರಳಿಯಲುಬೇಕು ||೪||

ವಾದಿರಾಜನೊಡೆಯ ಹಯವದನನ್ನ ದಿವ್ಯ -
ಪಾದ ನಂಬಿಯಿರಬೇಕು ವರಾದಿಗಳ ಬಯಸುವೋರು ||೫||

naaraayaNa naaraayaNa naaraaYaNa naaraayaNa ||pa||

bhakti bEku parama virakti bEku harisa-
rvOttamaneMba nenavirabEku ||1||

ariShaDvargada vijaya bEku gurukulatilaka
gurumadhvamata bEku gurubhakti bEku ||2||

hariya DiMgarigara saMga bEku SaMkhacakra -
dharanaagi irabEku svarUpayOgyate bEku ||3||

vEdadabhyaasavu bEku adarartha hariyeMba
bOdhaviralubEku khaLaraLiyalubEku ||4||

vaadiraajanoDeya hayavadananna divya -
paada naMbiyirabEku varaadigaLa bayasuvOru ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru