ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ದೇವರ ದೇವನೆ ಬಾರೋ | ಹಯವದನ | Devara Devane Baaro | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ನಾರಾಯಣ ನಾರಾಯಣ ನಾರಾಯಣ ನಾರಾಯಣ ||ಪ||

ದೇವರದೇವನೆ ಬಾರೊ ದೇವಕಿನಂದನ ಬಾರೊ
ದೇವೇಂದ್ರನ ಸಲಹಿದ ದೇವ ಬಾರೊ ಹರಿಯೆ ||ಅಪ||

ಮಚ್ಚನಾಗಿ ಶ್ರುತಿಯ ತಂದಿತ್ತ ಭಕ್ತವತ್ಸಲನೆ ಭೃತ್ಯ
ಸತ್ಯವ್ರತನಿಗೊಲಿದ ಮಚ್ಛ ಬಾರೊ ಹರಿಯೆ ||೧||

ಸಾರಿದ ಸುರರಿಗಾಗಿ ನೀರೊಳಗೆ ಮುಳುಗಿ
ಗಿರಿಯ ಬೆನ್ನಲ್ಲಿ ಪೊತ್ತ ಕೂರ್ಮ ಬಾರೊ ಹರಿಯೆ ||೨||

ಧರೆಯನುದ್ಧರಿಸಲು ವರಾಹನಾದವನೆ
ಹಿರಣ್ಯಾಕ್ಷನ ಸೀಳ್ದ ಧೀರ ಬಾರೊ ಹರಿಯೆ ||೩||

ನಂಬಿದ ಭಕ್ತರ ಕಾವ ನಂಬೆ ಕರುಣದಿ ಕಲ್ಲ -
ಕಂಬದಿಂದ ಉದಿಸಿದ ಡಿಂಬ ಬಾರೊ ಹರಿಯೆ ||೪||

ಮಾಣವಕ ವೇಷನಾಗಿ ಕ್ಷೋಣಿ ಅಳೆದವನೆ
ದಾನವನ ಸೋಲಿಸಿದ ಜಾಣ ಬಾರೊ ಹರಿಯೆ ||೫||

ಕಡಿದು ದುಷ್ಟನೃಪರ ಬಿಡದೆ ಚಪ್ಪೆಕೊಡಲಿಯ
ಪಿಡಿದುಗ್ರ ಒಡೆಯ ಬಾರೊ ಹರಿಯೆ ||೬||

ವೃಂದಾರಕವಂದ್ಯ ಸೇತುಬಂಧದಿ ದಶಕಂದರನ 
ಕೊಂದ ರಾಮಚಂದ್ರ ಬಾರೊ ಹರಿಯೆ ||೭||

ಮಲ್ಲರನೆಲ್ಲ ಸೀಳಿ ಬಲ್ಲಿದ ಮಾವನ ಕೊಂದೆ
ಎಲ್ಲರ ವಲ್ಲಭ ಎಂಬೊ ಮಲ್ಲ ಬಾರೊ ಹರಿಯೆ ||೮||

ಬೌದ್ಧನಾಗಿ ದೈತ್ಯರಿಗೆ ಶುದ್ಧಬದ್ಧ ದಯತೋರಿ
ರುದ್ರನ್ನ ಸೋಲಿಸಿದ ಸುಭದ್ರ ಬಾರೊ ಹರಿಯೆ ||೯||

ಕರ್ಕಶದ ಖಳರನ್ನು ಕಲ್ಕಿರೂಪನಾಗಿ ಮೂಲೆ _
ಲಿಕ್ಕಿಸುವ ಸುಜನರ ಚೊಕ್ಕ ಬಾರೊ ಹರಿಯೆ ||೧೦||

ವಿಜಯ ಹಯವದನ ಭಜಕರ ಭಾಗ್ಯನಿಧಿ
ಸುಜನಾಬ್ಧಿ ವಾದಿರಾಜನ ತೇಜ ಬಾರೊ ಹರಿಯೆ ||೧೧||

naaraayaNa naaraayaNa naaraayaNa naaraayaNa ||pa||

dEvaradEvane baaro dEvakinaMdana baaro
dEvEMdrana salahida dEva baaro hariye ||apa||

maccanaagi shrutiya taMditta bhaktavatsalane bhRutya
satyavratanigolida macCa baaro hariye ||1||

saarida surarigaagi nIroLage muLugi
giriya bennalli potta kUrma baaro hariye ||2||

dhareyanuddharisalu varaahanaadavane
hiraNyaakShana sILda dhIra baaro hariye ||3||

naMbida bhaktara kaava naMbe karuNadi kalla -
kaMbadiMda udisida DiMba baaro hariye ||4||

maaNavaka vEShanaagi kShONi aLedavane
daanavana sOlisida jaaNa baaro hariye ||5||

kaDidu duShTanRupara biDade cappekoDaliya
piDidugra oDeya baaro hariye ||6||

vRuMdaarakavaMdya sEtubaMdhadi daSakaMdarana 
koMda raamacaMdra baaro hariye ||7||

mallaranella sILi ballida maavana koMde
ellara vallabha eMbo malla baaro hariye ||8||

bauddhanaagi daityarige Suddhabaddha dayatOri
rudranna sOlisida subhadra baaro hariye ||9||

karkaSada khaLarannu kalkirUpanaagi mUle _
likkisuva sujanara cokka baaro hariye ||10||

vijaya hayavadana bhajakara bhaagyanidhi
sujanaabdhi vaadiraajana tEja baaro hariye ||11||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru