ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಹರಿ ಎನ್ನು ಹರಿ ಎನ್ನು | ಪುರಂದರ ವಿಠಲ | Hari Ennu Hari Ennu | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಹರಿ ಎನ್ನು ಹರಿ ಎನ್ನು ಹರಿ ಎನ್ನು ಪ್ರಾಣಿ ||ಪ||
ಹರಿ ಎನ್ನದಿದ್ದರೆ ನರಹರಿ ಆಣೆ ||ಅಪ||

ಹೆಂಡಿರು ಮಕ್ಕಳು ಎರವೋರು ಪ್ರಾಣಿ| 
ಕೊಂಡು ಹೋಗುವಾಗ ಒಬ್ಬರ ಕಾಣೆ ||೧||

ದಾನವಿಲ್ಲದ ದ್ರವ್ಯ ಗಳಿಸಿದ್ಯೋ ಪ್ರಾಣಿ| 
ಪ್ರಾಣ ಹೋಗುವಾಗ ಕಾಣೆ ದುಗ್ಗಾಣಿ ||೨||

ನೀರ ಮೇಲನ ಗುಳ್ಳೆ ಸಂಸಾರ ಪ್ರಾಣಿ| 
ಪುರಂದರ ವಿಠಲನು ಸಾರಿದ ಪ್ರಾಣಿ ||೩||

hari ennu hari ennu hari ennu prANi ||pa||
hari ennadiddare narahari ANe ||apa||

heMDiru makkaLu eravOru prANi| 
koMDu hOguvAga obbara kANe ||1||

dAnavillada dravya gaLisidyO prANi| 
prANa hOguvAga kANe duggANi ||2||

nIra mElana guLLe saMsAra prANi| 
puraMdara viThalanu sArida prANi ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru