ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಪಾಲಿಸೇ ಪದುಮಾಲಯೆ | ವಿಜಯ ವಿಠಲ | Paalise Padumaalaye | Sri Vijaya Dasaru


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ಪಾಲಿಸೇ ಪದುಮಾಲಯೆ ನೀನೇ ಗತಿ ||ಪ|

ಬಾಲಕನು ತಾನಾಗಿ ಗೋಪಿಗೆ ಲೀಲೆಯಿಂದಲಿ ನಂದಗೋಕುಲ ||
ಬಾಲೆಯರ ಮೋಹಿಸುತ ಅಸುರರ ಕಾಲನೆನಿಸಿದ ಬಾಲಕನ ಪ್ರಿಯೆ ||ಅಪ||

ಅನ್ಯರ ನೆನೆಯಲೊಲ್ಲೆ ನಿನ್ನಯ ಪಾದ |
ವನು ನಂಬಿದೆ ನೀ ಬಲ್ಲೆ ತಡಮಾಡದೆಲೆ ||
ಚಿಣ್ಣ ಕರೆಯಲು ಘನ್ನ ಮಹಿಮನು ಉನ್ನತದ ರೂಪಿನಲಿ
ಗುಣ ಸಂಪನ್ನ ರಕ್ಕಸನನ್ನು ಸೀಳಿದ ಪನ್ನಗಾದ್ರಿ ನಿವಾಸನ ಪ್ರಿಯೆ ||೧||

ಅರಿಯದ ತರಳನೆಂದು ಶ್ರೀಪತಿ ಸತಿ ಕರುಣದಿ ಸಲಹೆ ಬಂದು
ಕಾರುಣ್ಯ ಸಿಂಧು | ಸರಸಿಜಾಸನ ರುದ್ರರೀರ್ವರ ವರದಿ ಮೂರ್ಖರು ಸುರರ ಬಾಧಿಸೆ |
ಹರಿವರರ ದಂಡೆತ್ತಿ ಬಹು ಮುಖ ದುರುಳನ ಶಿರ ತರಿದನ ಪ್ರಿಯೆ ||೨||

ಅಜಮನಸಿಜ ಜನನಿ ಅಂಬುಜ ಪಾಣಿ ಭುಜಗ ಸನ್ನಿಭ ವೇಣಿ ನಿತ್ಯ ಕಲ್ಯಾಣಿ |
ಕುಜನ ಮರ್ಧನ ವಿಜಯವಿಠಲನ ಭಜಿಸಿ ಪಾಡುವ ಭಕ್ತ ಕೂಟವ ನಿಜದಿ ಸಲಹುವೆನೆಂಬ 
ಬಿರುದಿನ ವಿಜಯ ಸಾರಥಿ ವಿಶ್ವಂಭರ ಪ್ರಿಯೆ ||೩||

pAlisE padumAlaye nInE gati ||pa|
 
bAlakanu tAnAgi gOpige lIleyiMdali naMdagOkula ||
bAleyara mOhisuta asurara kAlanenisida bAlakana priye ||apa||
 
anyara neneyalolle ninnaya pAda |
vanu naMbide nI balle taDamADadele ||
ciNNa kareyalu Ganna mahimanu unnatada rUpinali
guNa saMpanna rakkasanannu sILida pannagAdri nivAsana priye ||1||
 
ariyada taraLaneMdu SrIpati sati karuNadi salahe baMdu
kAruNya siMdhu | sarasijAsana rudrarIrvara varadi mUrKaru surara bAdhise |
harivarara daMDetti bahu muKa duruLana Sira taridana priye ||2||
 
ajamanasija janani aMbuja pANi Bujaga sanniBa vENi nitya kalyANi
kujana mardhana vijayaviThalana Bajisi pADuva Bakta kUTava nijadi salahuveneMba 
birudina vijaya sArathi viSvaMBara priye ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru