ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಸುಲಭ ರಂಗಯ್ಯನ ಸೇವೆ | ಪುರಂದರ ವಿಠಲ | Sulabha Rangayyana Seve | Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಸುಲಭ ಸುಲಭ ಸುಲಭ ಸುಲಭ ||ಪ||
ಸುಲಭ ರಂಗಯ್ಯನ ಸೇವೆ ಸುಲಭ ಸುಲಭ 
ಸುಲಭ ಕೃಷ್ಣಯ್ಯನ ಸೇವೆ ಸುಲಭ ||ಅಪ||

ಅಡವಿ ಶ್ರೀ ತುಳಸಿಯ ಅನುಗ್ರಹದಿಂದ ತಂದು
ಮುಡಿಪು ಹಾಕಿಸಿ ಕೊಂಬೊ ಅಖಿಲ ರಂಗಯ್ಯನ ಸೇವೆ ||೧||

ಮುಷ್ಟಿ ತುಂಬವಲಕ್ಕಿ ಕೊಟ್ಟ ಸುಧಾಮಗೆ ಅಷ್ಟೈಶ್ವರ್ಯ 
ಕೊಟ್ಟ ಅಖಿಲ ಕೃಷ್ಣಯ್ಯನ ಸೇವೆ ||೨||

ಬಡವ ಬಲ್ಲಿದನೆಂದು ಕಡೆಗೆ ಸಂಪತ್ತ ಕೊಟ್ಟು 
ಕರುಣದಿ ಕಾಯೋ ನಮ್ಮ ಪುರಂದರ ವಿಠಲ  ||೩||

sulabha sulabha sulabha sulabha ||pa||
sulabha raMgayyana sEve sulabha sulabha 
sulabha kRuShNayyana sEve sulabha ||apa||

aDavi shrI tuLasiya anugrahadiMda taMdu
muDipu haakisi koMbo akhila raMgayyana sEve ||1||

muShTi tuMbavalakki koTTa sudhaamage aShTaishvarya 
koTTa akhila kRuShNayyana sEve ||2||

baDava ballidaneMdu kaDege saMpatta koTTu 
karuNadi kaayO namma puraMdara viThala  ||3||
 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru