ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಿಡೆನು ಬಿಡೆನು ನಿನ್ನ | ಹಯವದನ | Bidenu Bidenu Ninna | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಬಿಡೆನು ಬಿಡೆನು ನಿನ್ನ ಚರಣ ಕಮಲವ| ಎನ್ನ
ಹೃದಯ ಮಧ್ಯದೊಳಿಟ್ಟು ಭಜಿಸುವೆ ಅನುದಿನ ||ಪ||

ಬಲಿಯ ದಾನವ ಬೇಡಿ  ಅಳೆಯೆ ಬ್ರಹ್ಮಾಂಡವ|
ನಳಿನೋದ್ಭವ ಬಂದು ಪಾದವ ತೊಳೆಯೇ|
ಉಗುರಿನ ಕೊನೆಯಿಂದ ಉದಿಸಿದಳಾ ಗಂಗೆ|
ಹರಿ ಪಾದ ತೀರ್ಥವೆಂದು ಹರ ಧರಿಸಿದನಾಗ ||೧||

ಆ ಪತಿ ಶಾಪದಿ ಅಹಲ್ಯ ಸಾಸಿರಯುಗ|
ಪಾಶಾಣವಾಗುತ್ತ ಪಥದೊಳಗಿರಲು|
ಶ್ರೀಪತಿ ನಿನ್ನಯ ಶ್ರೀಪಾದ ಸೋಕಲು|
ಪಾಪ ರಹಿತಳಾಗಿ ಪದವಿ ಕಂಡಾಳಾಗ ||೨||

ವಜ್ರಾಂಕುಶ ಧ್ವಜ ಪದುಮ ರೇಖೆಗಳಿಂದ|
ಪ್ರಜ್ವಲಿಸುವ ನಿನ್ನ ಪಾದ ಪದ್ಮವನು|
ಗರ್ಜಿಸಿ ಭಜಿಸುವೆ ಹಯವದನನೆ|
ಭವ ಜರ್ಜರ ಬಿಡಿಸುವನೆಂದು ನಂಬಿಹಲಾಗಿ ||೩||

biDenu biDenu ninna caraNa kamalava| enna
hRudaya madhyadoLiTTu Bajisuve anudina ||pa||
 
baliya dAnava bEDi  aLeye brahmAMDava|
naLinOdBava baMdu pAdava toLeyE|
ugurina koneyiMda udisidaLA gaMge|
hari pAda tIrthaveMdu hara dharisidanAga ||1||
 
A pati SApadi ahalya sAsirayuga|
pASANavAgutta pathadoLagiralu|
SrIpati ninnaya SrIpAda sOkalu|
pApa rahitaLAgi padavi kaMDALAga ||2||
 
vajrAMkuSa dhvaja paduma rEKegaLiMda|
prajvalisuva ninna pAda padmavanu|
garjisi Bajisuve hayavadanane|
Bava jarjara biDisuvaneMdu naMbihalAgi ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru