ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ದೇವ ಬಂದ ನಮ್ಮ ಸ್ವಾಮಿ | ಪುರಂದರ ವಿಠಲ | Deva Banda Namma | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ದೇವ ಬಂದ ನಮ್ಮ ಸ್ವಾಮಿ ಬಂದನೋ |ಪ|
ದೇವರ ದೇವ ಶಿಖಾಮಣಿ ಬಂದನೋ |ಅಪ|

ಉರಗಶಯನ ಬಂದ ಗರುಡಗಮನ ಬಂದ|
ನರಗೊಲಿದವ ಬಂದ ನಾರಾಯಣ ಬಂದ |೧|

ಮಂದರೋದ್ಧರ ಬಂದ ಮಾಮನೋಹರ ಬಂದ|
ಬೃಂದಾವನ ಪತಿ ಗೋವಿಂದ ಬಂದನೋ |೨|

ನಕ್ರಹರನು ಬಂದ ಚಕ್ರಧರನು ಬಂದ|
ಅಕ್ರೂರಗೊಲಿದ ತ್ರಿವಿಕ್ರಮ ಬಂದನೋ |೩|

ಪಕ್ಷಿವಾಹನ ಬಂದ ಲಕ್ಷ್ಮಣಾಗ್ರಜ ಬಂದ|
ಅಕ್ಷಯ ಫಲದ ಶ್ರೀ ಲಕ್ಷ್ಮೀರಮಣ ಬಂದನೋ |೪|

ನಿಗಮಗೋಚರ ಬಂದ ನಿತ್ಯತೃಪ್ತನು ಬಂದ|
ನಗೆಮೊಗ ಪುರಂದರ ವಿಠಲ ಬಂದನೋ |೫|

dEva baMda namma svAmi baMdanO |pa|
dEvara dEva SiKAmaNi baMdanO |apa|
 
uragaSayana baMda garuDagamana baMda|
naragolidava baMda nArAyaNa baMda |1|
 
maMdarOddhara baMda mAmanOhara baMda|
bRuMdAvana pati gOviMda baMdanO |2|
 
nakraharanu baMda cakradharanu baMda|
akrUragolida trivikrama baMdanO |3|
 
pakShivAhana baMda lakShmaNAgraja baMda|
akShaya Palada SrI lakShmIramaNa baMdanO |4|
 
nigamagOcara baMda nityatRuptanu baMda|
nagemoga puraMdara viThala baMdanO |5|

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru