ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಏನು ಕಾರಣ ಬಾಯ ತೆರೆದೀ | ಕಾಗಿನೆಲೆ ಆದಿಕೇಶವ | Enu Karana Baya Teredi | Sri Kanaka Dasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanaka Dasaru


ಏನು ಕಾರಣ ಬಾಯ ತೆರೆದೀ ಪೇಳೆಲೋ 
ದಾನವಾಂತಕ ಅಹೋಬಲ ನಾರಸಿಂಹ ||ಪ||

ನಿಗಮ ಚೋರನ ಕೊಲಲು ತೆರೆದೆಯೋ ಬಾಯ
ನಗವ ಬೆನ್ನಲಿ ಹೊತ್ತು ನಡುಗಿ ತೆರೆದೆಯೋ ಬಾಯ
ಭೂಮಿಗಳ್ಳನ ಕೊಂದು ಬಳಲಿ ತೆರೆದೆಯೋ ಬಾಯ
ಜಗವರಿಯೆ ಪೇರೂರವಿರಿದ ಪ್ರಹ್ಲಾದ ವರದ ||೧||

ಬಲಿಯ ದಾನವ ಬೇಡಲೆಂದು ತೆರೆದೆಯೋ ಬಾಯ
ಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೋ ಬಾಯ 
ಕುಲಸತಿಯ ಅರಸಿ ಕಾಣದೆ ತೆರೆದೆಯೋ ಬಾಯ
ಮಲೆತು ಮಾವನ ಕೊಂದು ನಿಂದೆ ಶ್ರೀನಾರಸಿಂಹ ||೨||

ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೋ ಬಾಯ
ಏರಿ ಅಶ್ವವ ಮೆಟ್ಟಿ ಅಳಲಿ ತೆರೆದೆಯೋ ಬಾಯ
ಮಾರಪಿತ ಕಾಗಿನೆಲೆಯಾದಿ ಕೇಶವ ರಂಗ
ಧೀರ ಶ್ರೀನಾಥ ಭವನಾಶ ಪೇಳೆಲೋ ||೩||

Enu kaaraNa baaya teredI pELelO 
daanavaaMtaka ahObala naarasiMha ||pa||

nigama cOrana kolalu teredeyO baaya
nagava bennali hottu naDugi teredeyO baaya
bhUmigaLLana koMdu baLali teredeyO baaya
jagavariye pErUravirida prahlaada varada ||1||

baliya daanava bEDaleMdu teredeyO baaya
CaladiMda kShatriyara kolalu teredeyO baaya 
kulasatiya arasi kaaNade teredeyO baaya
maletu maavana koMdu niMde SrInaarasiMha ||2||

naariyara celvikeya nODi teredeyO baaya
Eri aSvava meTTi aLali teredeyO baaya
maarapita kaagineleyaadi kESava raMga
dhIra SrInaatha bhavanaasha pELelO ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru