ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಸಾರಿ ಭಜಿಸಿರೋ ಟೀಕಾರಾಯರಂಘ್ರಿಯ | ವಿಜಯ ವಿಠಲ| Saari Bhajisiro Teekarayara | Vijaya Dasaru


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ಸಾರಿ ಭಜಿಸಿರೋ ಟೀಕಾರಾಯರಂಘ್ರಿಯ
ಘೋರ ಪಾತಕಾಂಬುಧಿಯ ದೂರ ಮಾಳ್ಪರಾ ||ಪ||

ಮೋದ ತೀರ್ಥರ ಮತವ ಸಾಧಿಸುವರ |
ಪಾದಸೇವ್ಯರ ದುರ್ಭೋಧ ಕಳೆವರ ||೧||

ಭಾಷ್ಯ ತತ್ವವ ಸುವಿಶೇಷ ಮಾಳ್ಪರ | 
ದೋಷದೂರರ ವಾಸವಾದಿ ರೂಪರ ||೨||

ಶ್ಯಾಮಸುಂದರ ಹರಿಗೆ ಪ್ರೇಮ ಪೂರ್ಣರ |
ನೇಮ ನಿತ್ಯದ ನಿಷ್ಕಾಮ ನಾವರ ||೩||

ಮೋಕ್ಷದಾತರ ಅಕ್ಷೋಭ್ಯ ತೀರ್ಥರ ಅ
ಶಿಕ್ಷಿತಾದರ ಅಪೇಕ್ಷರಹಿತರ ||೪||

ವಿಜಯ ವಿಠಲನ ಅಂಘ್ರಿ ಭಜನೆ ಮಾಳ್ಪರ |
ಕುಜನ ಭಂಜರ ದಿಗ್ವಿಜಯರಾಯರ ||೫||

sAri BajisirO TIkArAyaraMGriya
GOra pAtakAMbudhiya dUra mALparA ||pa||
 
mOda tIrthara matava sAdhisuvara |
pAdasEvyara durBOdha kaLevara ||1||
 
BAShya tatvava suviSESha mALpara | 
dOShadUrara vAsavAdi rUpara ||2||
 
SyAmasuMdara harige prEma pUrNara |
nEma nityada niShkAma nAvara ||3||
 
mOkShadAtara akShOBya tIrthara a
SikShitAdara apEkSharahitara ||4||
 
vijaya viThalana aMGri Bajane mALpara |
kujana BaMjara digvijayarAyara ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru