ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಸುಲಭ ಪೂಜೆಯ ಮಾಡಿ | ಪುರಂದರ ವಿಠಲ | Sulabha Poojeya Madi | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಸುಲಭ ಪೂಜೆಯ ಮಾಡಿ ಬಲವಿಲ್ಲದವರು ||ಪ||
ನಳಿನನಾಭನ ಪಾದ ನಳಿನ ಸೇವಕರು ||ಅಪ||

ಇರುಳು ಹಚ್ಚುವ ದೀಪ ಹರಿಗೆ ನೀಲಾಂಜನವು |
ಮರೆಯ ಮಾಡುವ ವಸ್ತ್ರ ಪರಮ ಮಡಿಯು |
ತಿರುಗಾಡಿ ದಣಿಯುವುದೆ ಹರಿಗೆ ಪ್ರದಕ್ಷಿಣೆಯು |
ಹೊರಳಿ ಮಲಗುವುದೆಲ್ಲಾ ಹರಿಗೆ ವಂದನೆಯು ||೧||

ನುಡಿವ ಮಾತುಗಳೆಲ್ಲ ಕಡಲ ಶಯನನ ಜಪವು |
ಮಡದಿ ಮಕ್ಕಳು ಮತ್ತೆ ಒಡನೆ ಪರಿವಾರ ||
ನಡುಮನೆಯು ಅಂಗಳವು ಉಡುಪಿ ವೈಕುಂಠಗಳು |
ಎಡಬಲದ ಮನೆಯವರು ಕಡು ಭಾಗವತರು ||೨||

ಹೀಗೆ ಅನುದಿನ ನುಡಿದು ಹಿಗ್ಗುವ ಜನರ ಭವರೋಗ ಪರಿಹರವು |
ಮೂರ್ಜಗದಿ ಸುಖವು || 
ಪೋಗುತಿದೆ ಈ ಆಯು ಬೇಗದಿಂದಲಿ ನಮ್ಮಾ |
ಯೋಗೀಶ ಪುರಂದರ ವಿಠಲನ ನೆನೆ ನೆನೆದು ||೩||

sulaBa pUjeya mADi balavilladavaru ||pa||
naLinanABana pAda naLina sEvakaru ||apa||
 
iruLu haccuva dIpa harige nIlAMjanavu |
mareya mADuva Bakta parama maDiyu |
tirugADi daNiyuvude harige pradakShiNeyu |
horaLi malaguvudellA harige vaMdaneyu ||1||
 
nuDiva mAtugaLella kaDala Sayanana japavu |
maDadi makkaLu matte oDane parivAra ||
naDumaneyu aMgaLavu uDupi vaikuMThagaLu |
eDabalada maneyavaru kaDu BAgavataru ||2||
 
hIge anudina nuDidu higguva janara BavarOga pariharavu |
mUrjagadi suKavu || 
pOgutide I Ayu bEgadiMdali nammA |
yOgISa puraMdara viThalana nene nenedu ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru