ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಭಜಿಪೆ ಸದಾ ಗುರುರಾಜರ | ನರಹರಿ ವಿಠಲ | Bhajipe Sada Gururaja | Narahari Vithala


ಸಾಹಿತ್ಯ : ಶ್ರೀ ನರಹರಿ ವಿಠಲ ದಾಸರು 
Kruti: Sri Narahari Vittala Dasaru 


ಭಜಿಪೆ ಸದಾ ಗುರುರಾಜರ ಪಾದ ಭಜಿಪೆ ಸದಾ || ಪ ||
ಪರಮ ಸರಸ ಸುಧಾ ಪರಿಮಳ ಬೆರೆಸಿದ || ಅಪ ||

ನಂದನಂದನಾನಂದದಿ ನೋಡುವರನ
ಒಂದೇ ಮನದಿ ನಾ ಗುರು ರಾಘವೇಂದ್ರರನ || ೧ ||

ಮೋದ ತೀರ್ಥಮತಾಬ್ಧಿ ಚಂದ್ರನ
ಶ್ರೀ ಸುಧೀಂದ್ರ ಕರಕಮಲ ಸಂಜಾತರ || ೨ ||

ಸಿರಿ ನರಹರಿ ವಿಠ್ಠಲನು ಮುದದಿ
ಪೊಳೆವ ಬೃಂದಾವನದಿ ವರ ಕೊಡುವ || ೩ ||

bhajipe sadaa gururaajara paada bhajipe sadaa || pa ||
parama sarasa sudhaa parimaLa beresida || apa ||

naMdanaMdanaanaMdadi nODuvarana
oMdE manadi naa guru raaGavEMdrarana || 1 ||

mOda tIrthamataabdhi caMdrana
shrI sudhIMdra karakamala saMjaatara || 2 ||

siri narahari viThThalanu mudadi
poLeva bRuMdaavanadi vara koDuva || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru