ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಏನು ಮರುಳಾದೆಯಮ್ಮ | ಪುರಂದರ ವಿಠಲ | Enu Maruladeyamma | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಏನು ಮರುಳಾದೆಯಮ್ಮ ಎಲೆ ರುಕ್ಮಿಣಿ ||ಪ||
ಹೀನಕುಲದ ಗೊಲ್ಲ ಶ್ರೀಗೋಪಾಲಕೃಷ್ಣನಿಗೆ ||ಅಪ||

ಹಾಸಿಕಿಲ್ಲದೆ ಹಾವಿನ ಮೇಲೆ ಒರಗಿದವನ
ಹೇಸಿಕಿಲ್ಲದೆ ಕರಡಿಯ ಕೂಡಿದವನ 
ಗ್ರಾಸಕಿಲ್ಲದೆ ತೊತ್ತಿನ ಮಗನ ಮನೆಲುಂಡ
ದೋಷಕಂಜದೆ ಮಾವನ ಶಿರವ ತರಿದವಗೆ ||೧||

ಕುಂಡಗೋಳಕರ ಮನೆ ಕುಲದೈವನೆನಿಸಿದಗೆ
ಮಂಡೆಬೋಳರ ಮನಕೆ ಮನದೈವವ
ಹಿಂಡುಗೊಲ್ಲರ ಮನೆಯ ಹಿರಿಯನೆಂದೆನಿಸುವ
ಭಂಡಾಟದ ಗೊಲ್ಲ ಈ ಬಳಗದೊಳಗೆಲ್ಲ ||೨||

ಒಬ್ಬರಲಿ ಹುಟ್ಟಿ ಒಬ್ಬರಲಿ ಬೆಳೆದ
ಒಬ್ಬರಿಗೆ ಮಗನಲ್ಲ ಜಗದೊಳಗೆಲ್ಲ
ಅಬ್ಬರದ ದೈವ ಶ್ರೀಪುರಂದರವಿಠಲನ
ಉಬ್ಬುಬ್ಬಿ ಮದುವ್ಯಾದಿ ಉತ್ಸಾಹದಿಂದ ||೩||

Enu maruLaadeyamma ele rukmiNi ||pa||
hInakulada golla SrIgOpaalakRuShNanige ||apa||

haasikillade haavina mEle oragidavana
hEsikillade karaDiya kUDidavana 
graasakillade tottina magana maneluMDa
dOShakaMjade maavana Sirava taridavage ||1||

kuMDagOLakara mane kuladaivanenisidage
maMDebOLara manake manadaivava
hiMDugollara maneya hiriyaneMdenisuva
bhaMDATada golla I baLagadoLagella ||2||

obbarali huTTi obbarali beLeda
obbarige maganalla jagadoLagella
abbarada daiva SrIpuraMdaraviThalana
ubbubbi maduvyaadi utsaahadiMda ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru