ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಹನುಮ ನಮ್ಮ ತಾಯಿ-ತಂದೆ | ಪುರಂದರ ವಿಠಲ | Hanuma namma Tayi Tande | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಹನುಮ ನಮ್ಮ ತಾಯಿ-ತಂದೆ, ಭೀಮ ನಮ್ಮಾ ಬಂಧು-ಬಳಗ, 
ಆನಂದ ತೀರ್ಥರೆ ನಮ್ಮ ಗತಿಗೋತ್ರವಯ್ಯಾ ||ಪ||

ತಾಯಿತಂದೆ ಹಸುಳೆಗಾಗಿ ಸಹಾಯ ಮಾಡಿ ಸಾಕುವಂತೆ 
ಆಯಾಸವಿಲ್ಲದೆ ಸಂಜೀವನವ ತಂದೆ ||
ಗಾಯಗೊಂಡ ಕಪಿಗಳನ್ನು ಸಾಯದಂತೆ ಪೊರೆವ ರಘು
ರಾಮನಂಘ್ರಿಗಳೇ ಸಾಕ್ಷಿ ತ್ರೇತಾಯುಗದಿ ||೧||

ಬಂಧು-ಬಳಗದಂತೆ ಆಪದ್ಬಾಂಧವನಾಗಿ ಪಾರ್ಥನಿಗೆ 
ಬಂದ ದುರಿತಗಳ ಪರಿಹರಿಸಿ ||
ಅಂಧಕ ಜಾತರಕೊಂದು ನಂದಕಂದಾರ್ಪಣೆಯೆಂದ ಗೋ-
ವಿಂದನಂಘ್ರಿಗಳೇ ಸಾಕ್ಷಿ ದ್ವಾಪರಯುಗದಿ ||೨||

ಗತಿಗೋತ್ರರಂತೆ ಸಾಧು ತತಿಗಳಿಗೆ ಮತಿಯ ತೋರಿ
ಮತಿಗೆಟ್ಟ ಇಪ್ಪತ್ತೊಂದು ಮತವ ಖಂಡಿಸಿ ||
ಮತಿವಂತ ಸದ್ವೈಷ್ಣವರಿಗೆ ಸದ್ಗತಿ ತೋರಿದ ಪರಮಾತ್ಮ
ಗತಿಗುರು ಪುರಂದರ ವಿಠಲನೇ ಸಾಕ್ಷಿ ಕಲಿಯುಗದಲ್ಲಿ ||೩||

hanuma namma tAyi-taMde, BIma nammA baMdhu-baLaga, 
AnaMda tIrthare namma gatigOtravayyA ||pa||
 
tAyitaMde hasuLegAgi sahAya mADi sAkuvaMte 
AyAsavillade saMjIvanava taMde ||
gAyagoMDa kapigaLannu sAyadaMte poreva raGu
rAmanaMGrigaLE sAkShi trEtAyugadi ||1||
 
baMdhu-baLagadaMte ApadbAMdhavanAgi pArthanige 
baMda duritagaLa pariharisi ||
aMdhaka jAtarakoMdu naMdakaMdArpaNeyeMda gO-
viMdanaMGrigaLE sAkShi dvAparayugadi ||2||
 
gatigOtraraMte sAdhu tatigaLige matiya tOri
matigeTTa ippattoMdu matava KaMDisi ||
mativaMta sadvaiShNavarige sadgati tOrida paramAtma
gatiguru puraMdara viThalanE sAkShi kaliyugadalli ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru