ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಇಂದು ನಿನ್ನ ಮೊರೆಯ ಹೊಕ್ಕೆ | ಪುರಂದರ ವಿಠಲ | Indu ninna Moreya Hokke | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಇಂದು ನಿನ್ನ ಮೊರೆಯ ಹೊಕ್ಕೆ ವೆಂಕಟೇಶನೇ |
ಎಂದಿಗಾದರೆನ್ನ ಕಾಯೋ ಶ್ರೀನಿವಾಸನೇ ||ಪ||

ಶೇಷಗಿರಿಯ ವಾಸ ಶ್ರೀಶ ದೋಷ ರಹಿತನೇ ||
ಏಸು ದಿನಕು ನಿನ್ನ ಪಾದ ದಾಸನು ನಾನೇ ||
ಕ್ಲೇಶಗೈಸದಿರು ಎನ್ನ ಸ್ವಾಮಿಯು ನೀನೇ ||೧||

ಕಮಲನಯನ ಕಾಮ ಜನಕ ಕರುಣವಾರಿಧೇ |
ರಮೆಯನಾಳ್ವ ಕಮಲನಾಭ ಹೇ ದಯಾನಿಧೇ ||
ಯಮನಪುರದಿ ಶಿಕ್ಷಿಸದಿರು ಪಾರ್ಥಸಾರಥೇ ||೨||

ಉರಗಶಯನ ಸುರರಿಗೊಡೆಯ ಸಿರಿಯ ರಮಣನೇ |
ಶರಣ ಪಾಲ ಬಿರುದು ತೋರಿ ಪೊರೆವ ದೇವನೇ ||
ಕರುಣಿಸೆನಗೆ ಮುಕುತಿಯ ಪುರಂದರ ವಿಠಲನೇ ||೩||

iMdu ninna moreya hokke veMkaTESanE |
eMdigAdarenna kAyO SrInivAsanE ||pa||
 
SEShagiriya vAsa SrISa dOSha rahitanE ||
Esu dinaku ninna pAda dAsanu nAnE ||
klESagaisadiru enna svAmiyu nInE ||1||
 
kamalanayana kAma janaka karuNavAridhE |
rameyanALva kamalanABa hE dayAnidhE ||
yamanapuradi SikShisadiru pArthasArathE ||2||
 
uragaSayana surarigoDeya siriya ramaNanE |
SaraNa pAla birudu tOri poreva dEvanE ||
karuNisenage mukutiya puraMdara viThalanE ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru