ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಇಷ್ಟುದಿನ ಭೂವೈಕುಂಠ | ಹಯವದನ | Ishtu Dina Bhuvaikuntha | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಇಷ್ಟುದಿನ ಭೂವೈಕುಂಠ ಎಷ್ಟುದೂರವೆನುತಿದ್ದೆ
ದೃಷ್ಟಿಯಿಂದಲಿ ನಿಮ್ಮ ಕಂಡೆ ಸೃಷ್ಟಿಪತಿ ಶ್ರೀರಂಗೇಶ||ಪ||

ಚಿತ್ರಬೀದಿ ವಿರಾಜಿತ ಚಾರುನೂಪುರಶೋಭಿತ
ಸಪ್ತಪ್ರಕಾರ ಸಂಪೃಷ್ಠ ಉತ್ತಮ ಶ್ರೀರಂಗಶಾಯಿ||೧||

ಹೇಮಕವಾಟಗಳಿಂದ ಹೇಮಸೋಪಾನಗಳಲ್ಲಿ
ಹೇಮಕಟಾಂಜನದಿಂದ ಗುಣಶೋಭಿತ ಶ್ರೀರಂಗೇಶ ||೨||

ಚತುರ ವೇದಗಳಲ್ಲಿ ಚತುರಮೂರ್ತಿ ವೀರ್ಯದಲ್ಲಿ
ಚತುರ ದಿಕ್ಕುಗಳಲ್ಲಿ ಚದುರ ಶ್ರೀರಾಮ ಶ್ರೀರಂಗಶಾಯಿ||೩||

ಪಂಕಜನಾಭನೆ ಏಸು ಪಾವನವೊ ನಿಮ್ಮ ದಿವ್ಯ
ಕುಂಕುಮಾಂಕಿತಚರಣ ಪಂಕಜಾಕ್ಷ ಶ್ರೀರಂಗೇಶ ||೪||

ಪುಣ್ಯವಿದ್ಯಾದಯಾನಿಧೆ ಪನ್ನಗಶಾಯಿ ಶೋಭಿತ
ಧನ್ಯ ಚಂದ್ರಪುಷ್ಕರಣ ಉನ್ನಂತ ಶ್ರೀಹಯವದನ ||೫||

iShTudina BUvaikuMTha eShTudooravenutidde
dRuShTiyiMdali nimma kaMDe sRuShTipati shrIraMgEsha||pa||

chitrabIdi viraajita chaarunUpurashObhita
saptaprakaara saMpRuShTha uttama shrIraMgashaayi||1||

hEmakavaaTagaLiMda hEmasOpaanagaLalli
hEmakaTaaMjanadiMda guNashObhita shrIraMgEsha ||2||

chatura vEdagaLalli chaturamUrti vIryadalli
chatura dikkugaLalli chadura shrIraama shrIraMgashaayi||3||

paMkajanaabhane Esu paavanavo nimma divya
kuMkumaaMkitacharaNa paMkajaakSha shrIraMgEsha ||4||

puNyavidyaadayaanidhe pannagashaayi shObhita
dhanya chaMdrapuShkaraNa unnaMta shrIhayavadana ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru