ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಪರದೇಶಿ ನೀನು ಸ್ವದೇಶಿ ನಾನು | ವಿಜಯ ವಿಠ್ಠಲ | Paradeshi Neenu Swadeshi Naanu | Vijaya Dasaru


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ಪರದೇಶಿ ನೀನು ಸ್ವದೇಶಿ ನಾನು  ||ಪ||

ಪರಮ ಭಾಗವತರನು ಪೋಗಿ ಕೇಳೋಣ ||ಅಪ||

ಎನಗೆ ಜನಕನು ನೀನು ನಿನಗಾರು ಜನಕನೊ
ಜನನಿ ಇಂದಿರೆದೇವಿ ನಿನಗಾವಳೊ
ವನಜಪೀಠನು ಭ್ರಾತ ನಿನಗಾವ ಭ್ರಾತನೊ
ಇನ ಸೋಮ ಮಾತುಳನು ನಿನಗಾವ ಮಾತುಳನೊ  ||೧||

ಸುರನದೀ ಅಗ್ರಜಳು ನಿನಗೆ ಅಗ್ರಜಳಾರು
ಶರನಿಧಿ ಭಾವ ನಿನಗಾರೊ ಭಾವ
ಸ್ಮರನು ಕಿರಿ ಸಹಭವನು ನಿನಗೆ ಸಹಭವನಾರೊ
ಸುರರು ಬಂಧುಗಳೆನಗೆ ನಿನಗಾರು ಬಾಂಧವರೊ  ||೨||

ವರ ಇಳೆಯು ಸಹಮಾತೆ ನಿನಗೆ ಸಹಮಾತೆ ಯಾರೊ
ಮರುತ ದೇವರೆ ಗುರುವು ನಿನಗಾರು ಗುರುವೊ
ಸಿರಿಯರಸ ವಿಜಯವಿಠ್ಠಲರೇಯನೆ ನಿನ್ನ
ಚರಣ ಸೇವಕ ನಾನು ನೀನಾರ ಸೇವಕನೊ  ||೩||


paradESi nInu svadEshi naanu  ||pa||

parama bhaagavataranu pOgi kELONa ||apa||

enage janakanu nInu ninagaaru janakano
janani iMdiredEvi ninagaavaLo
vanajapIThanu bhraata ninagaava bhraatano
ina sOma maatuLanu ninagaava maatuLano  ||1||

suranadI agrajaLu ninage agrajaLaaru
Saranidhi bhaava ninagaaro bhaava
smaranu kiri sahabhavanu ninage sahabhavanaaro
suraru baMdhugaLenage ninagaaru baaMdhavaro  ||2||

vara iLeyu sahamaate ninage sahamaate yaaro
maruta dEvare guruvu ninagaaru guruvo
siriyarasa vijayaviThThalarEyane ninna
caraNa sEvaka naanu nInaara sEvakano  ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru